ಹಸು ಮೇಯಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ…ಆರೋಪಿ ಅಂದರ್…4 ದಿನಗಳಲ್ಲೇ ಕಾಮುಕನಿಗೆ ಬೇಲ್…

  • Crime
  • January 11, 2024
  • No Comment
  • 553

ನಂಜನಗೂಡು,ಜ11,Tv10 ಕನ್ನಡ

ಹಸು ಮೇಯಿಸುತ್ತಿದ್ದ ಮಹಿಳೆ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಲು ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನ ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಂಬಳ್ಳಿ ಗ್ರಾಮದಲ್ಲಿ ನಡೆದಿದೆ.ಕೃತ್ಯವೆಸಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಾಮುಕನಿಗೆ ನಾಲ್ಕೇ ದಿನದಲ್ಲಿ ಜಾಮೀನು ದೊರೆತು ಬಿಡುಗಡೆಯೂ ಆಗಿದೆ.
ಚಿನ್ನಂಬಳ್ಳಿ ಗ್ರಾಮದ ನಂದೀಶ್ ಅತ್ಯಾಚಾರ ಆರೋಪದ ಮೇಲೆ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಮುಕ.ಡಿ.21 ರಂದು ಘಟನೆ ನಡೆದಿದೆ.ಚಿನ್ನಂಬಳ್ಳಿ ಗ್ರಾಮದ 44 ವರ್ಷದ ಮಹಿಳೆ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಬಂದ ನಂದೀಶ್ ತನ್ನ ಹಸು ಕಾಣೆಯಾಗಿದೆ ನೋಡಿದ್ಯಾ ಎಂದು ನೆಪವೊಡ್ಡಿ ಮಹಿಳೆ ಮೇಲೆ ಎರಗಿದ್ದಾನೆ.ಈ ವೇಳೆ ಮಹಿಳೆ ಕೂಗಾಡಿದಾಗ ಸಮೀಪದಲ್ಲಿದ್ದ ವ್ಯಕ್ತಿಯೊಬ್ಬರು ನೆರವಿಗೆ ಧಾವಿಸಿದಾಗ ನಂದೀಶ್ ಎಸ್ಕೇಪ್ ಆಗಿದ್ದಾನೆ.ದೂರು ದಾಖಲಾದ ನಂತರ ಕವಲಂದೆ ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೆ ಕೇವಲ ನಾಲ್ಕು ದಿನಗಳಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಜಾಮೀನು ದೊರೆತಿದೆ.ನಾಲ್ಕು ದಿನಗಳಲ್ಲಿ ಆರೋಪಿಗೆ ಬೇಲ್ ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *