PUMA ಕಂಪನಿ ಹೆಸರಲ್ಲಿ ನಕಲಿ ಪದಾರ್ಥಗಳ ಮಾರಾಟ ಆರೋಪ…ಲಕ್ಷಾಂತರ ಮೌಲ್ಯದ ಪದಾರ್ಥಗಳು ವಶ…

ಮೈಸೂರು,ಜ28,Tv10 ಕನ್ನಡ

ಹೆಸರಾಂತ PUMA ಕಂಪನಿಯ ಸಿದ್ದ ಉಡುಪುಗಳು ಹಾಗೂ ಪಾದರಕ್ಷೆಗಳನ್ನ ನಕಲು ಮಾಡಿ ಮಾರಾಟ ಮಾಡುತ್ತಿರುವ ಆರೋಪ ಹಿನ್ನಲೆ ಮೈಸೂರಿನ ಅಂಗಡಿಯೊಂದರ ಮೇಲೆ ಸರಸ್ವತಿಪುರಂ ಠಾಣೆ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಪದಾರ್ಥಗಳನ್ನ ವಶಪಡಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಬೋಗಾದಿ ಮುಖ್ಯರಸ್ತೆಯಲ್ಲಿರುವ ಫಂಕಿ ವರ್ಲ್ಡ್ ಎಂಬ ಅಂಗಡಿಯಲ್ಲಿ ಮಾರಾಟ ಮಾಡುತ್ತಿದ್ದ ಆರೋಪ ಬಂದಿದ್ದು ಪ್ರಕರಣ ದಾಖಲಾಗಿದೆ.

ಫಂಕಿ ವರ್ಲ್ಡ್ ನಲ್ಲಿ PUMA ಕಂಪನಿಯ ನಕಲಿ ಪಾದರಕ್ಷೆ ಹಾಗೂ ಸಿದ್ದ ಉಡುಪುಗಳನ್ನ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ತಿಳಿದ ತಕ್ಷಣ ಚೆನ್ನೈನಿಂದ ಆಗಮಿಸಿದ ಕಂಪನಿಯ ಅಧಿಕಾರಿ ತಿಯಾಗು ಎಂಬುವರು ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ವೇಳೆ ಪದಾರ್ಥಗಳ ಮೇಲೆ ಲೋಗೋ ಬಳಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.ಕಂಪನಿಯ ಸೌಹಾರ್ಧತೆ ಹಾಗೂ ಖ್ಯಾತಿಗೆ ಧಕ್ಕೆ ತರುತ್ತಿರುವ ಅಂಗಡಿ ಮೇಲೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ತಿಯಾಗು ರವರು ಮನವಿ ಮಾಡಿದ್ದಾರೆ.ಸಧ್ಯ ಸರಸ್ವತಿಪುರಂ ಠಾಣೆ ಪೊಲೀಸರು ಅಂಗಡಿ ಮೇಲೆ ದಾಳಿ ನಡೆಸಿ ಅನುಮಾನಕ್ಕೆ ಕಾರಣವಾದ ಲಕ್ಷಾಂತರ ಮೌಲ್ಯದ ಪದಾರ್ಥಗಳನ್ನ ವಶಕ್ಕೆ ಪಡೆದಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *