ಕಾರು ಢಿಕ್ಕಿ…ಭಾರಿ ಗಾತ್ರದ ಹುಲಿ ಸಾವು…ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಘಟನೆ…
- TV10 Kannada Exclusive
- January 29, 2024
- No Comment
- 185

ಮೈಸೂರು,ಜ29,Tv10 ಕನ್ನಡ
ಕಾರು ಢಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ.ಗಂಡು ಹುಲಿ ಸಾವನ್ನಪ್ಪಿದ್ದು ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ.ನಿನ್ನೆ ತಡರಾತ್ರಿ ಸುಮಾರು 12 ಗಂಟೆ ವೇಳೆಗೆ ಘಟನೆ ನಡೆದಿದೆ.ಇಟಿಯೋಸ್ ಕಾರ್ ಹುಲಿಗೆ ಢಿಕ್ಕಿ ಹೊಡೆದಿದೆ.ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ.ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳಾದ ಮಾಲತಿ ಪ್ರಿಯ,ಲಕ್ಷ್ಮಿನಾರಾಯಣ್,ಸುರೇಂದ್ರ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ನಂಜನಗೂಡು ಹಾಗೂ ಸುತ್ತ ಮುತ್ತ ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿತ್ತು.ಇದೇ ಹುಲಿ ಅಪಘಾತದಲ್ಲಿ ಸಿಲುಕಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಸಧ್ಯ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.ಅಪಘಾತವಾದ ಕಾರನ್ನ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಪ್ರಯಾಣಿಕರನ್ನ ವಿಚಾರಣೆ ನಡೆಸುತ್ತಿದ್ದಾರೆ…