ನಂಜನಗೂಡು:ಎರಡು ಗುಂಪುಗಳ ನಡುವೆ ಘರ್ಷಣೆ…ಕಲ್ಲು ತೂರಾಟ…ಹಲವು ಮನೆಗಳಿಗೆ ಹಾನಿ…ವಾಹನಗಳು ಜಖಂ…ಹಲ್ಲರೆ ಗ್ರಾಮದಲ್ಲಿ ಬಿಗುವಿನ ವಾತಾವರಣ…
- Crime
- January 30, 2024
- No Comment
- 204

ನಂಜನಗೂಡು,ಜ30,Tv10 ಕನ್ನಡ

ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ.ಎರಡು ಗುಂಪುಗಳ ನಡುವೆ ಶುರುವಾದ ಗಲಾಟೆ ಕಲ್ಲು ತೂರಾಟಕ್ಕೆ ತಿರುಗಿದೆ.ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಜಾತಿ ಸಂಘರ್ಷಕ್ಕೂ ಕಾರಣವಾಗಿದೆ.ಕಲ್ಲು ತೂರಾಟಕ್ಕೆ ಮುಂದಾದ ಕಾರಣ ಹಲವು ಮನೆಗಳಿಗೆ ಹಾನಿಯಾಗಿವೆ.ಉದ್ರಿಕ್ತರು ಕೈಗೆ ಸಿಕ್ಕ ವಾಹನಗಳನ್ನ ಜಖಂಗೊಳಿಸಿದ್ದಾರೆ.ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಡಿದ್ದಾರೆ.ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.ರಸ್ತೆಯೊಂದಕ್ಕೆ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಗಲಾಟೆ ಶುರುವಾಗಿದೆ ಎನ್ನಲಾಗಿದೆ.ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ಭೇಟಿ ನೀಡಿದ್ದಾರೆ.ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ.ಸಧ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಬಿಗುವಿನ ವಾತಾವರಣ ನಿರ್ಮಾಣವಾಗಿದೆ…