ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಪೆಡ್ಲರ್ ಗಳ ಬಂಧನ…40 ಲಕ್ಷ ಮೌಲ್ಯದ ಗಾಂಜಾ ವಶ…

ಮೈಸೂರು,ಜ31,Tv10 ಕನ್ನಡ

ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪೆಡ್ಲರ್ ಗಳನ್ನ ಬಂಧಿಸಲಾಗಿದ್ದು ಆರೋಪಿಗಳಿಂದ 40 ಲಕ್ಷ ಮೌಲ್ಯದ 85 ಕೆಜಿ 730 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಒಡಿಸ್ಸಾ ಮೂಲದ ರಾಜಿಕ್ ಮಲ್ಲಿಕ್ ಹಾಗೂ ಆಂಧ್ರ ಮೂಲದ ಜಾಫರ್ ಬಂಧಿತರು.ಸಾತಗಳ್ಳಿ ಒಂದನೇ ಹಂತದಲ್ಲಿ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಆರೋಪಿಗಳು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ.ಒರಿಸ್ಸಾದಿಂದ ರೈಲಿನಲ್ಲಿ ಗಾಂಜಾ ತಂದು ಮೈಸೂರಿನಲ್ಲಿ ಚಿಲ್ಲರೆಯಾಗಿ ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಎಂ.ಮೋಹನ್ ಕುಮಾರ್ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಮಾರುತಿ ಅಂತರಗಟ್ಟಿ,ಕಿರಣ್ ಎಂ ಹಂಪಿಹೋಳಿ ಎಎಸ್ಸೈ ಅಸ್ಗರ್ ಖಾನ್ ಹಾಗೂ ಸಿಬ್ಬಂದಿಗಳಾದ ಸಲೀಂಪಾಷ,ರಾಮಸ್ವಾಮಿ,ಲಕ್ಷ್ಮೀಕಾಂತ್,ಉಮಾಮಹೇಶ್,ಪ್ರಕಾಶ್,ಗಣೇಶ್,ಮಹೇಶ್,ಸುರೇಶ್,ಚಂದ್ರಶೇಖರ್,ನರಸಿಂಹ,ಗೋವಿಂದ,ಮಹೇಶ್,ಮಧುಸೂಧನ್,ಶಿವಣ್ಣ,ರಮ್ಯ,ಮಮತ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ಈ ಸಂಭಂಧ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಐ ಮೋಹನ್ ಕುಮಾರ್ ರವರ ತಂಡದ ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಪ್ರಶಂಸಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *