ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲು…ಸಂಸದ ಪ್ರತಾಪ್ ಸಿಂಹ ರಿಂದ ಕೇಸ್ ಫೈಲ್…
- TV10 Kannada Exclusive
- March 1, 2024
- No Comment
- 103
ಬೆಂಗಳೂರು,ಮಾ1,Tv10 ಕನ್ನಡ
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ದ ಬೆಂಗಳೂರಿನ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿದೆ.ಸಂಸದ ಪ್ರತಾಪ್ ಸಿಂಹ ಮೊಕದ್ದಮೆ ದಾಖಲಿಸಿದ್ದಾರೆ.
ನನ್ನ ಮತ್ತು ನನ್ನ ಕುಟುಂಬದ ವಿರುದ್ದ ಮಾನಹಾನಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್ನಲ್ಲಿ ಪ್ರತ್ಯೇಕವಾಗಿ ಖಾಸಗಿ ದೂರು ನೀಡಿದ್ದರು.
ಫೆ 29 ರಂದು ಅರ್ಜಿಯನ್ನು ಪುರಸ್ಕರಿಸಿದ 32 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟೇಟ್ ನ್ಯಾಯಾಲಯದ ನ್ಯಾಯಾಧೀಶರು, ಲಕ್ಷ್ಮಣ್ ವಿರುದ್ದ ಐಪಿಸಿ 500 ರ ಅನ್ವಯ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಲಕ್ಷ್ಮಣ್ ಅವರು ಸುದ್ದಿಗೋಷ್ಠಿ ನಡೆಸಿ ನನ್ನ ಮತ್ತು ನನ್ನ ವಿರುದ್ದ ಮಾನಹಾನಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೊರೆ ಹೋಗಿದ್ದರು…