ಪಾರದರ್ಶಕವಾಗಿ,ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಿ…ಚುನಾವಣಾಧಿಕಾರಿಗಳಿಗೆ ಮೈಸೂರು,ಮಂಡ್ಯ ಜಿಲ್ಲಾಧಿಕಾರಿಗಳ ಮನವಿ…

ಮೈಸೂರು,ಮಾ5,Tv10 ಕನ್ನಡ

ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ತಿಳಿಸಿದ್ದಾರೆ.

ಕೆ.ಆರ್.ನಗರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರ ಸಂಬoಧ ಪೂರ್ವ ಸಿದ್ಧತಾ ಸಭೆಯಲ್ಲಿ ಉಭಯ ಜಿಲ್ಲಾಧಿಕಾರಿಗಳು ಮಾತನಾಡಿದರು.

ಎಲ್ಲ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ನ್ಯೂನತೆಗಳಿದ್ದಲ್ಲಿ ಸರಿಪಡಿಸುವಂತೆ ಎಲ್ಲಾ ಸೆಕ್ಟರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಅದಕ್ಕೆ ಸಂಬoಧಿಸಿದ ನಮೂನೆಗಳಾದ ವಿಎಂ1, ವಿಎಂ2, ವಿಎಂ3 ಭರ್ತಿ ಮಾಡುವ ಬಗ್ಗೆ ಆರಕ್ಷಕ ಇಲಾಖೆಯೊಂದಿಗೆ ಬಿಎಲ್‌ಒಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಭರ್ತಿ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಅಂತರ ಜಿಲ್ಲಾ ಗಡಿಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ತಕ್ಷಣ ಅದರ ನಿಯಮಗಳಂತೆ ಚೆಕ್ ಪೋಸ್ಟ್ ನಿರ್ಮಿಸಿ ಅಲ್ಲಿನ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿಕೊಟ್ಟು ನಿಯಮಿತವಾಗಿ ವಾಹನ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ವಿವಿಧ ಇಲಾಖೆಗಳ ಸಮನ್ವಯತೆ ಸೆಕ್ಟರ್ ಆಫೀಸರ್‌ಗಳ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅತಿ ಮುಖ್ಯವಾಗಿ ಹರಿಯಬೇಕು. ಎಲ್ಲಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗಳ ಕೈಪಿಡಿ, ಇವಿಎಂ ಅಧಿಕಾರಿಗಳ ಕೈಪಿಡಿ ಹಾಗೂ ಚುನಾವಣಾ ಆಯೋಗದಿಂದ ಬರುವ ಎಲ್ಲಾ ಕೈಪಿಡಿ ಮತ್ತು ಸುತ್ತೋಲೆಗಳಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.

ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಸಾರ್ವಜನಿಕ ಪ್ರದೇಶಗಳಿಂದ ನಿಗದಿತ ಅವಧಿಯಲ್ಲಿ ತೆರವುಗೊಳಿಸುವಂತೆ ಹಾಗೂ ಕಾಮಗಾರಿಗಳು ಯಾವ ಹಂತದಲ್ಲಿವೆ ಎಂಬ ಪಟ್ಟಿಯನ್ನು ತಯಾರಿಸಿ ವರದಿ ಪರಿಶೀಲಿಸಲು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಎಆರ್‌ಒ ಸುಪ್ರಿಯಾ ಬಣಗಾರ್, ಕೆ.ಆರ್ ನಗರ ಮತ್ತು ಸಾಲಿಗ್ರಾಮದ ತಹಶಿಲ್ದಾರ್ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಉಪಸ್ಥಿತರಿದ್ದರು.

Spread the love

Related post

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ ಗೃಹಬಳಕೆಯ 119 ಸಿಲಿಂಡರ್ ಸೀಜ್…

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ…

ಮೈಸೂರು,ನ21,Tv10 ಕನ್ನಡ ಸಿಸಿಬಿ ಹಾಗೂ ಸರಸ್ವತಿಪುರಂ ಠಾಣೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಮೈಸೂರು,ನ21,Tv10 ಕನ್ನಡ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.ಮೈಸೂರಿನ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ…
ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21…

ನಂಜನಗೂಡು,ನ20,Tv10 ಕನ್ನಡ ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು…

Leave a Reply

Your email address will not be published. Required fields are marked *