ಮೈಸೂರು:ಮೈಮೇಲೆ ಬರುತ್ತಿದ್ದ ದೆವ್ವದ ಕಾಟಕ್ಕೆ ಬೇಸತ್ತು ಯುವಕ ಆತ್ಮಹತ್ಯೆ…

ಮೈಸೂರು,ಮಾ6,Tv10 ಕನ್ನಡ

ಮೈಮೇಲೆ ಬರುತ್ತಿದ್ದ ದೆವ್ವದ ಕಾಟಕ್ಕೆ ಬೇಸತ್ತ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಾರ್ಬಳ್ಳಿ ಗ್ರಾಮದ ಋಷಭೇಂದ್ರ (21) ಮೃತ ದುರ್ದೈವಿ.ಪಿಯುಸಿ ಓದಿದ್ದ ಋಷಭೇಂದ್ರ ಗೆ ಕಳೆದ ನಾಲ್ಕು ವರ್ಷದಿಂದ ಮೈಮೇಲೆ ಗಾಳಿ ಆವರಿಸುತ್ತಿದೆ ಎಂದು ನಂಬಿ ಕಿರುಕುಳ ಅನುಭವಿಸುತ್ತಿದ್ದ.ಈ ಬಗ್ಗೆ ಹೆತ್ತವರು ಮನೋವೈದ್ಯರನ್ನ ಸಂಪರ್ಕಿಸಿ ಚಿಕಿತ್ಸೆ ಕೊಡಿಸಿದ್ದರು.ಹೀಗಿದ್ದೂ ಮಾನಸಿಕವಾಗಿ ಋಷಭೇಂದ್ರ ಹೊರಬಂದಿರಲಿಲ್ಲ.ನಿನ್ನೆ ಮಾರ್ಬಳ್ಳಿಯಿಂದ ದೂರ ಗ್ರಾಮದಲ್ಲಿರುವ ಅಜ್ಜಿ ಮನೆಗೆ ತೆರಳುವುದಾಗಿ ತಿಳಿಸಿ ಹೊರಟವನು ಮನೆಗೆ ಹೊಂದಿರುಗಿಲ್ಲ.ಇಂದು ಬೆಳಿಗ್ಗೆ ಬೆಮಲ್ ಲೇಔಟ್ ನಲ್ಲಿರುವ ಗಣಪತಿ ದೇವಸ್ಥಾನ ಇರುವ ಪಾರ್ಕ್ ನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾನೆ.ಈತನ ಕೈಮೇಲೆ ಅಮ್ಮ ಎಂದು ಅಚ್ಚೆ ಬರೆಸಿಕೊಂಡಿದ್ದು ತನ್ನ ಜೇಬಿನಲ್ಲಿ ತಾಯಿಯ ಮೊಬೈಲ್ ನಂಬರ್ ಬರೆದ ಚೀಟಿ ಇಟ್ಟುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಕುವೆಂಪುನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಾಯಿ ನೀಡಿದ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *