ಲೋಕಾ ಬಲೆಗೆ ಸೆಸ್ಕ್ ಎಇ ಹಾಗೂ ಲೈನ್ ಮನ್ …ವಿದ್ಯುತ್ ಸಂಪರ್ಕ ನೀಡಲು ಲಂಚ ಪಡೆಯುತ್ತಿದ್ದ ಖದೀಮರು ಲಾಕ್…

ಮೈಸೂರು,ಮಾ7,Tv10 ಕನ್ನಡ

ವಿದ್ಯುತ್ ಸಂಪರ್ಕ ನೀಡಲು ಲಂಚದ ಬೇಡಿಕೆ ಇಟ್ಟ ಸೆಸ್ಕ್‌ನ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸೆಸ್ಕ್‌ನ ಎ ಇ ಜಿ.ಹರೀಶ್, ಜೂನಿಯರ್ ಲೈನ್‌ಮನ್ ಗುಂಡಪ್ಪ(29) ಬಲೆಗೆ ಬಿದ್ದವರು.
ಕುವೆಂಪು ನಗರದಲ್ಲಿರುವ ಸೆಸ್ಕ್‌ನ ಉಪ ವಿಭಾಗದ ಕಚೇರಿಯಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರು ಮೂಲದ ಅಭಿಷೇಕ್ ಅವರು ಮೈಸೂರು ನಗರದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದುರು.ಇದಕ್ಕಾಗಿ ಎಇ ಹರೀಶ್ ಅವರು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಭಿಷೇಕ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಗುರುವಾರ ಸಂಜೆ ಕಚೇರಿಯಲ್ಲಿ ಎಇ ಹರೀಶ್ ಪರವಾಗಿ ಮಾತನಾಡಿದ ಲೈನ್‌ಮನ್ ಗುಂಡಪ್ಪ ಲಂಚ ಸ್ವೀಕರಿಸುತ್ತಿದ್ದಾಗ ಕಾರ್ಯಚರಣೆ ನಡೆಸಿ ಇಬ್ಬರನ್ನು ರೆಡ್ ಹ್ಯಾಂಡಾಗಿ ಹಿಡಿದು ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ವಿ.ಜೆ.ಸಜೀತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿ.ಕೃಷ್ಣಯ್ಯ, ಇನ್ಸ್‌ಪೆಕ್ಟರ್‌ಗಳಾದ ಉಮೇಶ್, ಜಯರತ್ನ, ಸಿಬ್ಬಂದಿಗಳಾದ ಗುರುಪ್ರಸಾದ್, ವೀರಭದ್ರ ಸ್ವಾಮಿ, ಕಾಂತರಾಜು,ಆಶಾ, ತ್ರಿವೇಣಿ, ಮೋಹನ, ಪ್ರದೀಪ ಭಾಗವಹಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *