ವ್ಯಾಲೆಂಟೈನ್ಸ್ ಡೇ ದಿನವೇ ಅತ್ಯಾಚಾರಕ್ಕೆ ಒಳಗಾದ ಯುವತಿ ನೇಣು ಬಿಗಿದು ಆತ್ಮಹತ್ಯೆ…ಆರೋಪಿಯನ್ನ ಅರೆಸ್ಟ್ ಮಾಡದ ಪೊಲೀಸರ ವಿರುದ್ದ ಕುಟುಂಬಸ್ಥರ ಆಕ್ರೋಷ…

  • Crime
  • March 12, 2024
  • No Comment
  • 1811

ಹುಣಸೂರು,ಮಾ12,Tv10 ಕನ್ನಡ

ವ್ಯಾಲೆಂಟೈನ್ಸ್ ಡೇ ದಿನವೇ ಅತ್ಯಾಚರಕ್ಕೆ ಒಳಗಾದ ಯುವತಿಯೊಬ್ಬಳು ನ್ಯಾಯ ದೊರೆಯದ ಹಿನ್ನಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕು ಶ್ಯಾನಭೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ರಂಜಿತಾ(19) ಮೃತ ದುರ್ದೈವಿ ಯುವತಿ.ಅದೇ ಗ್ರಾಮದ ವೇಣುಗೋಪಾಲ್ ಕೃಷ್ಣ(35) ಎಂಬಾತನ ಮೇಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.ಘಟನೆ ನಡೆದು ಸುಮಾರು ಒಂದು ತಿಂಗಳಾದರೂ ನ್ಯಾಯ ದೊರೆಯದ ಹಿನ್ನಲೆ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಆರೋಪಿಯನ್ನ ಬಂಧಿಸುವಲ್ಲಿ ವಿಫಲರಾದ ಪೊಲೀಸರ ವಿರುದ್ದ ಕುಟುಂಬಸ್ಥರು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಫೆಬ್ರವರಿ 14 ವ್ಯಾಲೆಂಟೈನ್ಸ್ ದಿನ ರಂಜಿತಾಳನ್ನ ವೇಣುಗೋಪಾಲ್ ತನ್ಮ ಬೊಲೆರೋ ವಾಹನದಲ್ಲಿ ಕರೆದೊಯ್ದಿದ್ದಾನೆ.ಮದುವೆ ಆಗುವುದಾಗಿ ನಂಬಿಸಿ ಬೊಲೆರೋ ವಾಹನದಲ್ಲೇ ಬಲತ್ಕಾರ ಮಾಡಿದ್ದಾನೆ.ನಂತರ ಕೇರಳಾಗೆ ಕರೆದೊಯ್ದು ಅತ್ಯಾಚಾರ ಮಾಡಿ ಮೈಸೂರಿಗೆ ಕರೆತಂದು ಕೈಗೆ ಒಂದು ಸಾವಿರ ನೀಡಿ ಮನೆಗೆ ಹೋಗುವಂತೆ ತಿಳಿಸಿದ್ದಾನೆ.ತನ್ನನ್ನ ಮದುವೆ ಆಗುವಂತೆ ರಂಜಿತಾ ಒತ್ತಾಯಿಸಿದ್ದಾಳೆ.ಇಲ್ಲದ ಕಾರಣಗಳನ್ನ ನೀಡಿ ವಾಪಸ್ ಕಳುಹಿಸಿದ್ದಾನೆ.ವೇಣುಗೋಪಾಲ್ ವಿವಾಹಿತನಾಗಿ ಎರಡು ಮಕ್ಕಳ ತಂದೆಯಾಗಿದ್ದರೂ 19 ವರ್ಷದ ರಂಜಿತಾಳನ್ನ ಮದುವೆ ಆಗುವುದಾಗಿ ನಂಬಿಸಿ ಬಲತ್ಕಾರ ಮಾಡಿ ವಂಚಿಸಿದ್ದಾನೆ.ರಂಜಿತಾಗೂ ಸಹ ಮದುವೆ ಫಿಕ್ಸ್ ಆಗಿತ್ತು ಎಂದು ಹೇಳಲಾಗಿದೆ.ವ್ಯಾಲೆಂಟೈನ್ಸ್ ದಿನವೇ ನಡೆದ ಅತ್ಯಾಚಾರ ಪ್ರಕರಣಕ್ಕೆ ಯುವತಿ ಬಲಿಯಾಗಿದ್ದಾಳೆ.ಸಧ್ಯ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *