ಮೈಸೂರು: ಗುಬ್ಬಚ್ಚಿ ಹಬ್ಬ ಆಚರಣೆ…ಪ್ರಾಣಿ ಪಕ್ಷಿ ಸಂಕುಲ ಉಳಿವಿಗೆ ಒತ್ತು ನೀಡುವಂತೆ ಕರೆ…

ಮೈಸೂರು: ಗುಬ್ಬಚ್ಚಿ ಹಬ್ಬ ಆಚರಣೆ…ಪ್ರಾಣಿ ಪಕ್ಷಿ ಸಂಕುಲ ಉಳಿವಿಗೆ ಒತ್ತು ನೀಡುವಂತೆ ಕರೆ…

ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಇಂದು ಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಕಿರಿಯ ಪ್ರಾಥಮಿಕ ಶಾಲೆ(ಗುಬ್ಬಚ್ಚಿಶಾಲೆ)ಯಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಾಣಿ ಪ್ರಿಯರು ಗುಬ್ಬಚ್ಚಿ ಹಬ್ಬ ಆಚರಿಸುವ ಮೂಲಕ ಅಳಿವಿನಂಚಿನಲ್ಲಿರುವ ಗುಬ್ಬಿ ಸಂತತಿಯನ್ನು ಮುಂದಿನ ಪೀಳಿಗೆಗೂ ಉಳಿಸುವಂತೆ ಸಂದೇಶ ಸಾರಿದರು.

ಪಕ್ಷಿಗಳಿಗೆ ನೀರು ನೀಡುವ ಮೂಲಕ ಪಕ್ಷಿ ತಜ್ಞ ಸಪ್ತ ಗಿರೀಶ್ ಎಂ ಕೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ
ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅರ್ಧ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾಕ್ಟರ್ ಆರ್ ಎಚ್ ಪವಿತ್ರ,
ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ,
ಪರಿಸರ ಪ್ರೇಮಿ ಶ್ರೀನಿವಾಸ್ ಭಾಷ್ಯಂ,
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್, ಅಜಯ್ ಶಾಸ್ತ್ರಿ, ಬೈರತಿಯ ಲಿಂಗರಾಜು, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್ , ದಿವ್ಯ ಹಾಗೂ ಇನ್ನಿತರರು ಭಾಗವಹಿಸಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *