ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಕಪಿಲಾ ನದಿ ದಂಡೆಯಲ್ಲಿ ಗೋಚರ…

ಪ್ಲಾಸ್ಟಿಕ್ ಚೀಲದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಕಪಿಲಾ ನದಿ ದಂಡೆಯಲ್ಲಿ ಗೋಚರ…

ನಂಜನಗೂಡು,ಮಾ22,Tv10 ಕನ್ನಡ

ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಶವ ಪತ್ತೆಯಾಗಿದೆ.ನಂಜನಗೂಡಿನ ಕಪಿಲಾ ನದಿಯಲ್ಲಿ ಪತ್ತೆಯಾಗಿದೆ.
ಸುಮಾರು 40 ರಿಂದ 45 ವರ್ಷ ವಯಸ್ಸಿನ ಅಪರಿಚಿತ ಪುರುಷನನ್ನ ಬೇರೆಡೆ ಕೊಲೆ ಮಾಡಿ ನದಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಕೈಯಲ್ಲಿ ರೇಖಾ ಎನ್ನುವ ಹಚ್ಚೆ ಹಾಕಲಾಗಿದೆ. ಕಳೆದ ಎರಡು ದಿನಗಳ ಹಿಂದೆ ದುಷ್ಕರ್ಮಿಗಳು ಅಪರಿಚಿತ ವ್ಯಕ್ತಿಯನ್ನು ಕೊಲೆಗೈದು, ಮೊದಲು ಬೆಡ್ ಶೀಟ್ ನಲ್ಲಿ ಸುತ್ತಿ ನಂತರ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಕೆಳಗಡೆ ಎಸೆದು ಹೋಗಿದ್ದಾರೆ. ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಶವವನ್ನು ಮಾರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ .
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಎಸ್ ಪಿ ನಂದಿನಿ, ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 201, 302, ಅಡಿಯಲ್ಲಿ ಪ್ರಕರಣ ದಾಖಲಾಗಿದೆ….

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *