ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ…ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಮೈಸೂರು,ಮಾ24,Tv10 ಕನ್ನಡ

ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ
ಯಾವ ಕಗ್ಗಂಟು ಆಗಿಲ್ಲ,
ಎಳೆದಾಟವೂ ಆಗಿಲ್ಲ.
ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.
ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.
ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ.
ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಸಾಧ್ಯನಾ…?
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲವಾಗಿದೆ.
ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ನಮಗೆ ಅನಾನುಕೂಲ ಆಗಿದೆ.ಅದರಂತೆ ಇವರ ಮೈತ್ರಿಯೂ ಅವರಿಗೆ ಅನುಕೂಲ ಆಗಲ್ಲ.
ಅವರ ಮೈತ್ರಿ ನಮಗೆ ಅನುಕೂಲ ಎಂದರು.
ನಾವು ನುಡಿದಂತೆ ನಡೆದಿದ್ದೇವೆ.
ಬಿಜೆಪಿಯವರಂತೆ ಸುಳ್ಳು ಹೇಳಲ್ಲ.
ಬಿಜೆಪಿಯವರು 600 ಭರವಸೆಗಳಲ್ಲಿ ಶೇಕಡಾ 10% ಈಡೇರಿಸಿಲ್ಲ.
ಮೋದಿಯವ್ರು ಜನಕ್ಕೆ 15 ಲಕ್ಷ ಕೋಟ್ರಾ…?
ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ..?
ರೈತರ ಆದಾಯ ಡಬಲ್ ಮಾಡಿದ್ರಾ..? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣ ಎಂಬ ಆರೋಪವನ್ನ
ಸ್ಪಷ್ಟವಾಗಿ ನಿರಾಕರಿಸಿದರು.
ಜನರು ಬಯಸಿದವರಿಗೆ ಟಿಕೆಟ್ ಕೊಟ್ಟಿದ್ದೇವೆ.
ಇದರಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂದರು.ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ರಣತಂತ್ರದ ಗುಟ್ಟು ಇದೆ.
ನಿಮಗೆಲ್ಲಾ ರಾಜಕೀಯ ಗುಟ್ಟು ಬಿಟ್ಟುಕೊಡಕ್ಕಾಗಲ್ಲ.
ಕೆಲವು ಗುಟ್ಟುಗಳನ್ನ ಗುಟ್ಟಾಗಿಯೇ ಇಡಬೇಕು.
ಲೋಕಸಭಾ ಚುನಾವಣೆಯಲ್ಲಿ ಕೆಲವು ಗುಟ್ಟುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *