ದೇವರಾಜ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…6.80 ಲಕ್ಷ ಮೌಲ್ಯದ 14 ವಾಹನ ವಶ…

ದೇವರಾಜ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…6.80 ಲಕ್ಷ ಮೌಲ್ಯದ 14 ವಾಹನ ವಶ…

ಮೈಸೂರು,ಮಾ27,Tv10 ಕನ್ನಡ

ದೇವರಾಜ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ದ್ವಿಚಕ್ರವಾಹನ ಕಳ್ಳನನ್ನು ಬಂಧಿಸಿದ್ದು 6.80 ಲಕ್ಷ ಮೌಲ್ಯದ 14 ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಮಂಡ್ಯ ಜಿಲ್ಲೆ ಆರತಿ ಉಕ್ಕಡದ ನಿವಾಸಿ ಸಂದೀಪ್ ಬಂಧಿತ ಆರೋಪಿ.ಈತನ ಬಂಧನದಿಂದ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯ 4 ಪ್ರಕರಣಗಳು,ಮಂಡಿ ಪೊಲೀಸ್ ಠಾಣೆಯ 5 ಪ್ರಕರಣಗಳು,ಮೇಟಗಳ್ಳಿ ಠಾಣೆಯ ಒಂದು ಹಾಗೂ ವಿವಿಪುರಂ ಪೊಲೀಸ್ ಠಾಣೆಯ ಒಂದು ಪ್ರಕರಣ ಪತ್ತೆಯಾದಂತಾಗಿದೆ.

ಸಂಚಾರ ಮತ್ತು ಅಪರಾಧ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ದೇವರಾಜ ಠಾಣೆಯ ಇನ್ಸ್ಪೆಕ್ಟರ್ ಟಿ.ಬಿ.ಶಿವಕುಮಾರ್,ಪಿಎಸ್ಸೈ ಗಳಾದ ಜೈಕೀರ್ತಿ ಹಾಗೂ ಪ್ರಭು ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸುರೇಶ್,ಮಂಜುನಾಥ್,ದೇವರಾಜು,ಸೋಮಶೆಟ್ಟಿ,ವೇಣುಗೋಪಾಲ್,ನಂದೀಶ್,ಮಾರುತಿ,ಪವನ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ನಗರಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ರವರು ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *