98.52 ಕೋಟಿ ಬಿಯರ್ ಕಚ್ಚಾ ವಸ್ತುಗಳು ಸೀಜ್…ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ…ಯುನೈಟೆಡ್ ಬ್ರೆವರೀಸ್ ನ 17 ಆರೋಪಿಗಳು ನಾಪತ್ತೆ…ಚುನಾವಣೆ ಹಿನ್ನಲೆ ಅಕ್ರಮ ದಾಸ್ತಾನು…?

98.52 ಕೋಟಿ ಬಿಯರ್ ಕಚ್ಚಾ ವಸ್ತುಗಳು ಸೀಜ್…ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ…ಯುನೈಟೆಡ್ ಬ್ರೆವರೀಸ್ ನ 17 ಆರೋಪಿಗಳು ನಾಪತ್ತೆ…ಚುನಾವಣೆ ಹಿನ್ನಲೆ ಅಕ್ರಮ ದಾಸ್ತಾನು…?

ನಂಜನಗೂಡು,ಏ3,Tv10 ಕನ್ನಡ

ನಂಜನಗೂಡು ತಾಲೂಕು ಇಮ್ಮಾವು ಗ್ರಾಮ ತಾಂಡ್ಯಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 98.52 ಕೋಟಿ ಮೊತ್ತದ ಬಿಯರ್ ಕಚ್ಚಾ ವಸ್ತುಗಳನ್ನ ಸೀಜ್ ಮಾಡಿದ್ದಾರೆ.ಘಟನೆಗೆ ಸಂಭಂಧಿಸಿದಂತೆ 17 ಮಂದಿ ಆರೋಪಿಗಳು ನಾಪತ್ತೆಯಾಗಿದ್ದಾರೆ.ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರೆವರೀಸ್ ಕಂಪನಿಯಲ್ಲಿ ಅಕ್ರಮ ದಾಸ್ತಾನು ಬೆಳಕಿಗೆ ಬಂದಿದೆ.ಚಾಮರಾಜನಗರ ಜಿಲ್ಲಾಧಿಕಾರಿಗಳು ಹಾಗೂ ಲೋಕಸಭಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ಕರೆ ಮೇರೆಗೆ ಅಬಕಾರಿ ಇಲಾಖೆ ಉಪಾಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಲೆಕ್ಕಪುಸ್ತಕಗಳಿಗೂ ದಾಸ್ತಾನಿಗೆ ಹೋಲಿಕೆ ಆಗದ ಹಿನ್ನಲೆ ಕಚ್ಚಾವಸ್ತುಗಳನ್ನ ಜಪ್ತಿ ಮಾಡಲಾಗಿದೆ.7000 ವಿವಿದ ಬ್ರಾಂಡಿನ ರೆಟ್ಟಿನಪೆಟ್ಟಿಗೆಗಳ ಬಿಯರ್ ದಾಸ್ತಾನು,6,03,644 ರೆಟ್ಟಿನಪೆಟ್ಟಿಗೆಗಳು,ಕೆಗ್ ಗಳಲ್ಲಿ 23,160 ಲೀಟರ್,ಬಿಬಿಟಿ ಟ್ಯಾಂಕ್ ನಲ್ಲಿ 5,16,700 ಲೀಟರ್,ಯು.ಟಿ.ಟ್ಯಾಂಕ್ ನಲ್ಲಿ 66,16,700 ಲೀಟರ್,ಸ್ಟೆಲೋಸ್ ಟ್ಯಾಂಕ್ ನಲ್ಲಿ 6,50,458 ಕೆಜಿ ಕಚ್ಚಾವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.ಜಪ್ಪಿಯಾದ ಒಟ್ಟು ಪದಾರ್ಥಗಳ ಮೌಲ್ಯ 98.52 ಕೋಟಿ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.ನಾಪತ್ತೆಯಾದ 17 ಆರೋಪಿಗಳ ಪತ್ತೆಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.ಒಟ್ಟಾರೆ ಅಬಕಾರಿ ಇಲಾಖೆಯ ಭರ್ಜರಿ ಬೇಟೆ ಇದಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *