ಯದುವೀರ್ ಪರ ಶಾಸಕ ಶ್ರೀವತ್ಸ ಪ್ರಚಾರ…ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಯದುವೀರ್ ಪರ ಶಾಸಕ ಶ್ರೀವತ್ಸ ಪ್ರಚಾರ…ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಮೈಸೂರು,ಏ7,Tv10 ಕನ್ನಡ

ಲೋಕಸಭಾ ಚುನಾವಣೆ ಕಾವು ದಿನೇ ದಿನೇ ಏರುತ್ತಿದೆ.ಅಭ್ಯರ್ಥಿಗಳ ಪರ ಪಕ್ಷದ ಮುಖಂಡರುಗಳು ಮನೆ ಮನೆ ಬಾಗಿಲು ತಟ್ಟಿ ಮತಯಾಚನೆ ಮಾಡುತ್ತಿದ್ದಾರೆ.ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿ ಶಾಸಕ ಶ್ರೀವತ್ಸ ಮೈಸೂರು ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಒಡೆಯರ್ ಅವರ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ನೀಡಿ ಮನೆ ಮನೆಗೆ ತೆರಳಿ ಬಿರುಸಿನ ಪ್ರಚಾರದ ಜೊತೆಗೆ ಮತಯಾಚಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಶ್ರೀವತ್ಸ
ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ವಿಶ್ವಮಟ್ಟದಲ್ಲಿ ಭಾರತವನ್ನು ವಿಶ್ವಗುರುನಾಗಿಸುವ ದೆಸೆಯಲ್ಲಿ ಪ್ರಧಾನಿ ಮೋದಿಯವರು ಕೈಗೊಂಡಿರುವ ರಾಜ ತಾಂತ್ರಿಕ ವಿಷಯಗಳಿಂದ ವಿಶ್ವದ ಬಲಿಷ್ಠ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಸ್ಥಾನ ಪಡೆದಿದೆ, ಅಲ್ಲದೆ ಮೋದಿವರ ಜನಪರ ಹಾಗೂ ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ, ಕೋಟ್ಯಂತರ ಜನರ ಆಶಯವಾಗಿದ್ದ ರಾಮ ಮಂದಿರ ನಿರ್ಮಾಣ ಸೇರಿ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.ಮತ್ತೆ ಮೋದಿ ಪ್ರದಾನಿಯಾಗಿಸಲು ಬಿಜೆಪಿ ಗೆ ನಿಮ್ಮ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು…

ಈ ಸಂದರ್ಭದಲ್ಲಿ ಎಸಿ ಮೋರ್ಚಾ ಅಧ್ಯಕ್ಷರಾದ ವಿ ಶೈಲೇಂದ್ರ, ಮೈಸೂರು ನಗರ ಉಪಾಧ್ಯಕ್ಷ ಜೋಗಿ ಮಂಜು,ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಕೆ ಆರ್ ಕ್ಷೇತ್ರದ ಅಧ್ಯಕ್ಷರಾದ ಗೋಪಾಲ್ ರಾಜ್ ಅರಸ್, ಜೆ ರವಿ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗ ಸ್ವಾಮಿ, ಹಾಗೂ ಸ್ಥಳಿಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *