ಚೆಪ್ಪಲಿಯಲ್ಲಿ ಸಿಮ್ ಕಾರ್ಡ್,ಮೆಮೋರಿ ಕಾರ್ಡ್ ಪತ್ತೆ…ಕಾರಾಗೃಹಕ್ಕೆ ಎಂಟ್ರಿ ವೇಳೆ ಸಿಕ್ಕಿಬಿದ್ದ ವಿಚಾರಣಾಧೀನ ಖೈದಿ…

ಚೆಪ್ಪಲಿಯಲ್ಲಿ ಸಿಮ್ ಕಾರ್ಡ್,ಮೆಮೋರಿ ಕಾರ್ಡ್ ಪತ್ತೆ…ಕಾರಾಗೃಹಕ್ಕೆ ಎಂಟ್ರಿ ವೇಳೆ ಸಿಕ್ಕಿಬಿದ್ದ ವಿಚಾರಣಾಧೀನ ಖೈದಿ…

ಮೈಸೂರು,ಏ7,Tv10 ಕನ್ನಡ

ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ದಾಖಲಿಸಲು ಕರೆತಂದ ವಿಚಾರಣಾಧೀನ ಖೈದಿಯ ಚಪ್ಪಲಿಯಲ್ಲಿ ಒಂದು ಸಿಮ್ ಕಾರ್ಡ್ ಹಾಗೂ ಮೆಮೋರಿ ಕಾರ್ಡ್ ಮತ್ತು ಪ್ಯಾಂಟ್ ಒಳಜೇಬಿನಲ್ಲಿ ಒಂದು ಸಿಮ್ ಕಾರ್ಡ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ದರೋಡೆ ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದ ಆರೋಪಿಯನ್ನ ಕೇಂದ್ರ ಕಾರಾಗೃಹಕ್ಕೆ ದಾಖಲಿಸುವ ವೇಳೆ ಮುಖ್ಯ ಗೇಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ತಪಾಸಣೆಗೆ ಒಳಪಡಿಸಿದಾಗ ಐನಾತಿಯ ಬಣ್ಣ ಬಯಲಾಗಿದೆ.ವಿಚಾರಣಾಧೀನ ಖೈದಿ ಕಿರಣ್ ತಪಾಸಣೆ ವೇಳೆ ಸಿಕ್ಕಿಬಿದ್ದ ಐನಾತಿ.ತಾನು ಧರಿಸಿದ್ದ ಚಪ್ಪಲಿಯ ಹೊಲಿಗೆಯನ್ನ ಬಿಡಿಸಿ ನಂತರ ಸಿಮ್ ಕಾರ್ಡ್ ಹಾಗೂ ಮೆಮೋರಿ ಕಾರ್ಡ್ ಇಟ್ಟು ನಂತರ ಹೊಲಿಗೆ ಹಾಕಿಕೊಂಡು ಕಾರಾಗೃಹ ಪ್ರವೇಶಿಸುವ ವೇಳೆ ಸಿಕ್ಕಿಬಿದ್ದಿದ್ದಾನೆ.

ಲಷ್ಕರ್ ಪೊಲೀಸ್ ಠಾಣೆಯಲ್ಲಿ ಕಿರಣ್ ವಿರುದ್ದ ದರೋಡೆ ಪ್ರಕರಣ ಆರೋಪವಿತ್ತು.ಈ ಸಂಭಂಧ ಬಂಧಿಸಿದ್ದ ಲಷ್ಕರ್ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿತ್ತು.ಆರೋಪಿಯನ್ನ ಕಾರಾಗೃಹಕ್ಕೆ ದಾಖಲಿಸಲು ಲಷ್ಕರ್ ಠಾಣೆ ಸಿಬ್ಬಂದಿಗಳಾದ ಚಿನ್ನಪ್ಪ ಕಲ್ಲೊಳ್ಳಿ ಹಾಗೂ ಮಂಜುನಾಥ್ ಕರೆತಂದಿದ್ದರು.ಎಂಟ್ರಿ ಕೊಡುವಾಗ ನಿಯಮಾನುಸಾರ ತಪಾಸಣೆ ನಡೆಸುವ ವೇಳೆ ಕಿರಣ್ ಸಿಮ್ ಕಾರ್ಡ್ ಹಾಗೂ ಮೆಮೋರಿ ಕಾರ್ಡ್ ಚಪ್ಪಲಿಯಲ್ಲಿ ಮರೆಮಾಚಿ ತಂದಿರುವುದು ಬೆಳಕಿಗೆ ಬಂದಿದೆ.ಎರಡು ಸಿಮ್ ಕಾರ್ಡ್ ಹಾಗೂ ಒಂದು ಮೆಮೋರಿ ಕಾರ್ಡ್ ವಶಪಡಿಸಿಕೊಂಡ ಕಾರಾಗೃಹ ಪೊಲೀಸರು ಈ ಸಂಭಂಧ ಕಿರಣ್ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *