ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಹಲ್ಲೆ…ವ್ಯಕ್ತಿ ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಪಬ್ಲಿಕ್ ಪ್ರಾಸಿಕ್ಯೂಟರ್ ಮೇಲೆ ಹಲ್ಲೆ…ವ್ಯಕ್ತಿ ವಿರುದ್ದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಏ9,Tv10 ಕನ್ನಡ

ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಭಂಧಿಸಿದಂತೆ ಕ್ಯಾತೆ ತೆಗೆದ ವ್ಯಕ್ತಿಯೋರ್ವ ಸರ್ಕಾರಿ ಅಭಿಯೋಜಕನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಕೆ.ಆರ್.ಠಾಣಾ ವ್ಯಾಪ್ತಿಯ ಬಸವೇಶ್ವರ ರಸ್ತೆಯಲ್ಲಿ ನಡೆದಿದೆ.ಪಿರಿಯಾಪಟ್ಟಣ ಹಾಗೂ ಹುಣಸೂರಿನಲ್ಲಿ ಪ್ರಭಾರ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಪ್ರಸಾದ್ ಗಾಂವ್ಕರ್ ರವರೇ ಹಲ್ಲೆಗೆ ಒಳಗಾದವರು.ಕಿರಣ್ ಕೌಶಿಕ್ ಎಂಬಾತ ಹಲ್ಲೆ ನಡೆಸಿದ್ದು ಸದರಿ ವ್ಯಕ್ತಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಶಿಪ್ರಸಾದ್ ಗಾಂವ್ಕರ್ ಪ್ರಕರಣ ದಾಖಲಿಸಿದ್ದಾರೆ.

ಹುಣಸೂರಿನ ಅಧಿಕ ಸಿಜೆ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯದಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳಾಗಿದ್ದಾರೆ.ಸದರಿ ಪ್ರಕರಣಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಕಿರಣ್ ಕೌಶಿಕ್ ಎಂಬಾತ ಶಿವಪ್ರಸಾದ್ ಗಾಂವ್ಕರ್ ರವರ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ.ಆರೋಪಿಗಳ ಕುಮ್ಮಕ್ಕಿನಿಂದ ಕಿರಣ್ ಕೌಶಿಕ್ ಹಲ್ಲೆ ನಡೆಸಿರುವುದಾಗಿ ಆರೋಪಿಸಿರುವ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಪ್ರಸಾದ್ ಗಾಂವ್ಕರ್ ರವರು ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಜರುಗಿಸುವಂತೆ ದೂರಿನಲ್ಲಿ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *