ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಚುನಾವಣಾ ಕರ್ತವ್ಯದಲ್ಲಿ ಲೋಪ…ಪಾಲಿಕೆ ಎಇಇ ಅಮಾನತು…ವಿದ್ಯುನ್ಮಾನ ಮತ ಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಆರೋಪ…

ಮೈಸೂರು,ಏ13,Tv10 ಕನ್ನಡ

ಲೋಕಸಭೆ ಚುನಾವಣಾ ಕರ್ತವ್ಯಕ್ಕೆ ಸಂಭಂಧಿಸಿದಂತೆ ವಿದ್ಯುನ್ಮಾನ ಮತಯಂತ್ರಗಳ ಸ್ಟ್ರಾಂಗ್ ರೂಂ ನಿರ್ವಹಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಮೈಸೂರು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲ ಅಭಿಯಂತರರು ಹಾಗೂ ಸ್ಟ್ರಾಂಗ್ ರೂಂ ಮತ್ತು ಮ್ಯಾನ್ ಪವರ್ ನೂಡಲ್ ಅಧಿಕಾರಿ ರಾಜೀವ್ ನಾಥ್ ರನ್ನ ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಿದ್ಯನ್ಮಾನ ಮತಯಂತ್ರಗಳ ವಾಹನವನ್ನ ಜೆ.ಎಸ್.ಎಸ್.ಕಲಾ ಮತ್ತು ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇರಿಸುವ ಕರ್ತವ್ಯದಲ್ಲಿ ಲೋಪವೆಸಗಿರುವ ಆರೋಪದ ಹಿನ್ನಲೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಕಾಲೇಜಿನ ಆಡಳಿತಮಂಡಳಿ ಜೊತೆ ವ್ಯವಹರಿಸಿ ಮುಖ್ಯದ್ವಾರ ತೆರೆಸುವ ವ್ಯವಸ್ಥೆ ಮಾಡಿಲ್ಲ ಈ ಕಾರಣ ವಿದ್ಯುನ್ಮಾನ ಮತಯಂತ್ರಗಳಿದ್ದ ವಾಹನ ಸುಮಾರು ಅರ್ಧಗಂಟೆ ಕಾಲ ರಸ್ತೆಯಲ್ಲೇ ನಿಂತಿದೆ.ಅಲ್ಲದೆ ವಿದ್ಯುನ್ಮಾನ ಮತಯಂತ್ರಗಳನ್ನ ಸ್ಟ್ರಾಂಗ್ ರೂಂ ನಲ್ಲಿ ಶೇಖರಿಸಿಡಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವುದಿಲ್ಲ,ಸರಿಯಾದ ಸಮಯದಲ್ಲಿ ಮರದ ಬಾಗಿಲು ತೆರೆಸಲು ಕಾರ್ಪೆಂಟರ್ ಕರೆಸುವಲ್ಲೂ ವ್ಯವಸ್ಥೆ ಮಾಡಿಲ್ಲ,ವಿದ್ಯುನ್ಮಾನ ಮತಯಂತ್ರಗಳನ್ನ ಸಾಗಿಸುವಾಗಲೂ ಖುದ್ದು ಹಾಜರಿರುವುದಿಲ್ಲ.ಈ ಎಲ್ಲಾ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳೂ ಆದ ಡಾ.ಕೆ.ವಿ.ರಾಜೇಂದ್ರ ರವರು ರಾಜೀವ್ ನಾಥ್ ರನ್ನ ಅಮಾನತ್ತಿನಲ್ಲಿಟ್ಟು ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *