ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ಮೋದಿ…ಸಕಲ ಸಿದ್ದತೆ…ಭಾರಿ ಭದ್ರತೆ…

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ಮೋದಿ…ಸಕಲ ಸಿದ್ದತೆ…ಭಾರಿ ಭದ್ರತೆ…

ಮೈಸೂರು,ಏ14,Tv10 ಕನ್ನಡ

ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.ಕಾರ್ಯಕರ್ತರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಲಿದ್ದಾರೆ.ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.ಮೋದಿ ಶಗಮನ ಹಿನ್ನಲೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ.
ಮೋದಿ ಆಗಮಿಸುವ ರಸ್ತೆಗಳು ಹಾಗೂ ಮಹಾರಾಜ ಕಾಲೇಜು ಸುತ್ತ,ಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದೆ,ಇಂದು ಬೆಳಗಿನಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗಿ ಭದ್ರತೆಯನ್ನು ಪರಿಶೀಲಿಸಿದ್ದಾರೆ.
ಮಧ್ಯಪ್ರದೇಶದಿಂದ ನೇರ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ, ಮಹಾರಾಜ ಕಾಲೇಜು ಮೈದಾನದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ವೇದಿಕೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹಾಗೂ ಅಭ್ಯರ್ಥಿಗಳಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಎಚ್. ಡಿ ಕುಮಾರಸ್ವಾಮಿ, ಎಸ್ ಬಾಲರಾಜ್, ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬಿಜೆಪಿ ಜೆಡಿಎಸ್ ಸಮಾವೇಶ ನಡೆಯುತ್ತಿರುವುದರಿಂದ ಮೈತ್ರಿ ಪಕ್ಷಗಳ ಕಾರ್ಯಕರ್ತರು ಮುಖಂಡರ ಉತ್ಸಾಹ ಮುಗಿಲು ಮುಟ್ಟಿದೆ.
ಸುಮಾರು ಒಂದು ಗಂಟೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರಧಾನಿಗಳು ನಂತರ ಮಂಗಳೂರಿಗೆ ತೆರಳಿ ರೋಡ್ ಷೋನಲ್ಲಿ ಪಾಲ್ಗೊಳ್ಳಲಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *