ಅನೈತಿಕ ಸಂಭಂಧ ಶಂಕೆ…ಚಾಕುವಿನಿಂದ ಇರಿದು ಪತ್ನಿ ಕೊಲೆಗೆ ಯತ್ನಿಸಿದ ಪತಿ…

ಅನೈತಿಕ ಸಂಭಂಧ ಶಂಕೆ…ಚಾಕುವಿನಿಂದ ಇರಿದು ಪತ್ನಿ ಕೊಲೆಗೆ ಯತ್ನಿಸಿದ ಪತಿ…

ಮೈಸೂರು,ಏ14,Tv10 ಕನ್ನಡ

ಪರಪುರುಷನೊಂದಿಗೆ ಅನೈತಿಕ ಸಂಭಂಧ ಇಟ್ಟುಕೊಂಡಿರುವುದಾಗಿ ಆರೋಪಿಸಿ ದಿನನಿತ್ಯ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿರಾಯ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯಿಂದ ಹಲ್ಲೆಗೊಳಗಾದ ಪತ್ನಿ ಸುಮಾ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದಾರೆ.ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಪತಿ ಕೃಷ್ಣ ತಲೆಮರೆಸಿಕೊಂಡಿದ್ದಾನೆ.
ಸುಮ ಹಾಗೂ ಕೃಷ್ಣ ಪ್ರೀತಿಸಿ ಮದುವೆ ಆಗಿದ್ದರು.ಸುಮ 2 ಮಕ್ಕಳ ತಾಯಿ ಆಗಿದ್ದರು.ಕುಡಿತದ ಚಟ ಅಂಟಿಸಿಕೊಂಡ ಕೃಷ್ಣ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ.ಇದೇ ವಿಚಾರದಲ್ಲಿ ಕಳೆದ ವರ್ಷ ಗಲಾಟೆ ಮಾಡಿ ಪತ್ನಿ ಮೇಲೆ ಮೊಚ್ಚಿನಿಂದ ಹಲ್ಲೆ ನಡೆಸಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕೃಷ್ಣ ಮತ್ತೆ ಕಿರುಕುಳ ನೀಡುತ್ತಿದ್ದ.ಪತಿಯ ವರ್ತನೆಗೆ ಬೇಸತ್ತ ಸುಮಾ ತವರು ಮನೆ ಸೇರಿದ್ದರು.ಆಗಾಗ ಬಂದು ತನ್ನ ಜೊತೆ ಮನೆಗೆ ಬರುವಂತೆ ಪೀಡಿಸುತ್ತಿದ್ದ.ಜೀವನೋಪಾಯಕ್ಕಾಗಿ ಸುಮಾ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.ಕೆಲಸದಿಂದ ಮನೆಗೆ ಹಿಂದಿರುಗುತ್ತಿದ್ದ ಸುಮಾರನ್ನ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಕೊಯ್ದು ಗಾಯಗೊಳಿಸಿ ಕೊಲೆಗೆ ಯತ್ನಿಸಿದ್ದಾನೆ.ತೀವ್ರ ಗಾಯಗೊಂಡ ಸುಮಾರನ್ನ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕೃಷ್ಣನಿಂದ ಮಗಳ ರಕ್ಷಣೆ ಬೇಕೆಂದು ಸುಮಾ ತಾಯಿ ಸುನಂದ ಮನವಿ ಮಾಡಿದ್ದು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *