ಗುಲಾಬಿ ನೀಡಿ ಮತದಾನ ಜಾಗೃತಿ…ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ಕಾರ್ಯಕ್ರಮ…

ಗುಲಾಬಿ ನೀಡಿ ಮತದಾನ ಜಾಗೃತಿ…ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ಕಾರ್ಯಕ್ರಮ…

ಮೈಸೂರು,ಏ25,Tv10 ಕನ್ನಡ

ನಗರದ ಸಿಟಿ ಬಸ್ ಸ್ಟ್ಯಾಂಡ್ ಆವರಣದಲ್ಲಿ
ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಹಾಗೂ ಮತದಾನದ ಕರೆಯೋಲೆ ನೀಡಿ ನಾಳೆ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮನವಿ ಮಾಡಲಾಯಿತು.ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷರಾದ ಸಿ ಎಸ್ ಚಂದ್ರಶೇಖರ್ ಮಾತನಾಡಿ, ಆಮಿಷಕ್ಕೆ ಮತ ಮಾರಿಕೊಳ್ಳುವುದರಿಂದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ಹೀಗಾಗಿ ಮತದಾರರು ಜಾಗೃತರಾಗುವ ಮೂಲಕ ಅರ್ಹ ಅಭ್ಯರ್ಥಿಗೆ ಮತ ನೀಡಬೇಕು ಎಂದು ತಿಳಿಸಿದರು.
18 ವರ್ಷ ತುಂಬಿದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಬೇಕು. ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತದಾನದಿಂದ ಮಾತ್ರ ಸಾಧ್ಯವಾಗಿದೆ. ಪಾರದರ್ಶಕತೆ ಮತ್ತು ಮುಕ್ತತೆಯಿಂದ ಮತದಾನದಲ್ಲಿ ಭಾಗಿಯಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಸಂಘಟನಾ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಎಸ್ ಎನ್ ರಾಜೇಶ್, ಚಿನ್ನ ಬೆಳ್ಳಿ ಅಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷರು ಸುರೇಶ್ ಗೋಲ್ಡ್ ಚಂದನ್, ಸುರೇಶ್, ಶ್ರೀಕಾಂತ್ ಕಶ್ಯಪ್, ಅನಿಲ್ ಕುಮಾರ್, ಬೈರತಿ ಲಿಂಗರಾಜು, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *