ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು…
- TV10 Kannada Exclusive
- April 29, 2024
- No Comment
- 117
ದಲಿತ ನಾಯಕ…ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ…ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆ ಉಸಿರು…
ಬೆಂಗಳೂರು,ಏ29,Tv10 ಕನ್ನಡ
ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತಿ ಪಡೆದ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವಿ. ಶ್ರೀನಿವಾಸ ಪ್ರಸಾದ್
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ನಿಧನ ಹೊಂದಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಪ್ರಸಾದ್ ದಲಿತ ನಾಯಕರಾಗಿ ಮುತ್ಸದ್ದಿ ರಾಜಕಾರಣಿಯಾಗಿ ಜನಾನುರಾಗಿಯಾಗಿ ಅಂಬೇಡ್ಕರ್ ಸಿದ್ದಾಂತಗಳನ್ನ ಮೈಗೂಡಿಸಿಕೊಂಡು 5 ದಶಕಗಳ ಕಾಲ ಜನಸೇವೆ ಸಲ್ಲಿಸಿದ್ದ ಶ್ರೀನಿವಾಸ್ ಪ್ರಸಾದ್ ಅಗಲಿದ್ದಾರೆ.
ಚಾಮರಾಜನಗರ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಸಾದ್
ಕಳೆದ ಮಾರ್ಚ್ 17 ರಂದು ರಾಜಕೀಯ ನಿವೃತ್ತಿ ಘೋಷಿಸಿದ್ದರು.
ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು…