ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…
- TV10 Kannada Exclusive
- April 29, 2024
- No Comment
- 67
ಮೈಸೂರು,ಏ29,Tv10 ಕನ್ನಡ
ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಲಷ್ಕರ್ ಠಾಣೆ ಪೊಲೀಸರು ವಾರಸುದಾರರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಇಂದಿರಾನಗರ ನಿವಾಸಿ ಲೇಖಾ ಎಂಬುವರು ನಿನ್ನೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ತಮ್ಮ ಮೊಬೈಲ್ ಹಾಗೂ ಪರ್ಸ್ ಕಳೆದುಕೊಂಡಿದ್ದರು.ಈ ಸಂಭಂಧ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕಿರಣ್,ಚಿನ್ನಪ್ಪ ಮತ್ತು ಚೇತನ್ ರವರು ಬಸ್ ನಿಲ್ದಾಣದ ಸಿಬ್ಬಂದಿಗಳ ಸಹಯೋಗದೊಂದಿಗೆ ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಮೊಬೈಲ್ ಫೋನ್ ಹಾಗೂ ಪರ್ಸ್ ನ್ನ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.ಲಷ್ಕರ್ ಠಾಣೆಯ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಹಾಗೂ ಎಸಿಪಿ ಶಾಂತಮಲ್ಲಪ್ಪ ರವರು ಶ್ಲಾಘಿಸಿದ್ದಾರೆ…