ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ಮೈಸೂರು,ಮೇ1,Tv10 ಕನ್ನಡ

ಯುಕನನ್ನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು ಹಾಗೂ ಚಿನ್ನಾಭರಣ ದೋಚಿದ್ದ ಮೂವರು ಖದೀಮರನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ತಾಲೂಕಿನ ಕಾಮನಕೆರೆ ಹುಂಡಿಯ ರಾಹುಲ್(20), ಬೆಳವಾಡಿಯ ಅಖಿಲೇಶ್(19) ಮತ್ತು ಹೂಟಗಳ್ಳಿಯ ನಂದೀಶ್(19) ಬಂಧಿತರು. ನ್ಯಾಯಾಂಗ
ಈ ಮೂವರು ನಗರದ ರೇಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ತೆರಳುತ್ತಿದ್ದ ಯುವಕ ಚಿರಾಗ್ ಜೈನ್ ಎಂಬಾತನನ್ನ ಅಡ್ಡಗಟ್ಟಿ ಕಾರಿನ ಸಮೇತ ಅಪಹರಿಸಿ ಯಶಸ್ವಿನಿ ಕಲ್ಯಾಣ ಮಂಟಪದ ಬಳಿಗೆ ಕರೆದೊಯ್ದು. ನಗದು 2 ಸಾವಿರ ನಗದು 39 ಗ್ರಾಂ ತೂಕದ ಎರಡು ಚಿನ್ನದ ಸರ ದೋಚಿ ಇಡೀ ರಾತ್ರಿ ಬಂಧನದಲ್ಲಿರಿಸಿಕೊಂಡು ನಂತರ ಬಿಡುಗಡೆ ಮಾಡಿದ್ದಾರೆ.
ಸಿದ್ದಾರ್ಥನಗರದ ನಿವಾಸಿ ಚಿರಾಗ್ ಜೈನ್(23) ಶನಿವಾರ ತಡ ರಾತ್ರಿ ರಾಜಸ್ತಾನದಿಂದ ಆಜ್ಮೀರ್ ಎಕ್ಸ್‌ಪ್ರೈಸ್ ರೈಲಿನಲ್ಲಿ ಬಂದಿದ್ದ ತಂದೆ-ತಾಯಿಯನ್ನು ಕರೆದುಕೊಂಡು ಹೋಗಲು ರೈಲ್ವೆ ನಿಲ್ದಾಣದ ಹಿಂಭಾಗದ ಗೇಟ್ ಕಡೆ ಹೋಗುತ್ತಿದ್ದಾಗ ಸ್ಕೂಟರ್‌ನಲ್ಲಿ ನಿಂತಿದ್ದ ಈ ಮೂವರು ಅಡ್ಡಗಟ್ಟಿ ಕಾರನ್ನು ನಿಲ್ಲಿಸಿ ಗಲಾಟೆ ಮಾಡಿ ಕಾರಿನಿಂದ ಚಿರಾಗ್ ಜೈನ್ ನನ್ನು ಇಳಿಸಿದ್ದಾರೆ.
ಬಳಿಕ ಮೂವರಲ್ಲಿ ಒಬ್ಬಾತ ಚಿರಾಗ್ ಜೈನ್‌ನನ್ನು ಹೆದರಿಸಿ ಕಾರಿನಲ್ಲಿ ಕುಳಿತುಕೊಂಡು ಹುಣಸೂರು ರಸ್ತೆಯ ಮೂಲಕ ಹೂಟಗಳ್ಳಿ ಕಡೆ ಬಂದಿದ್ದಾರೆ.ಜೊತೆಗಿದ್ದವರು ಸ್ಕೂಟರ್‌ನಲ್ಲಿ ಹಿಂಬಾಲಿಸಿದ್ದಾರೆ.
ಹೂಟಗಳ್ಳಿ ಬಳಿ ಕಾರನ್ನು ನಿಲ್ಲಿಸಿ 39 ಗ್ರಾಂ ತೂಕದ 2 ಚಿನ್ನದ ಸರ, ಮೊಬೈಲ್ ಹಾಗೂ 2 ಸಾವಿರ ರೂ. ನಗದನ್ನು ಕಿತ್ತುಕೊಂಡಿದ್ದಾರೆ. ಬೆಳಗಿನ ಜಾವ 5 ಗಂಟೆಯವರೆಗೆ ಅಲ್ಲೇ ಇರಿಸಿಕೊಂಡು ಬಳಿಕ ಕಾರಿನ ಕೀ ಕೊಟ್ಟು ಕಳುಹಿಸಿದ್ದಾರೆ.
ಈ ಸಂಬಂಧ ಚಿರಾಗ್ ಜೈನ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *