ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್…

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್…

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್…

ನಂಜನಗೂಡು,ಮೇ3,Tv10 ಕನ್ನಡ

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನ ಶ್ರೀರಾಂಪುರ ಬಡಾವಣೆಯಲ್ಲಿ ನಡೆದಿದೆ. ಪೋಕ್ಸೋ ಕಾಯಿದೆ ಅಡಿ ಆರೋಪಿ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರೌಡಿಶೀಟರ್ ಆಗಿರುವ ಆರೋಪಿ ಅಪ್ರಾಪ್ತ ಬಾಲಕಿಯ ಸೋದರಮಾವನೇ ಆಗಿದ್ದಾನೆ. ರಾಜೇಶ್ @ ದೈತ್ಯರಾಜ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ದಾಖಲಾಗಿದೆ. ಸಾಕಷ್ಟು ಕ್ರಿಮಿನಲ್ ಪ್ರಕರಣಗಳನ್ನ ಎದುರಿಸುತ್ತಿರುವ ರಾಜೇಶ್@ದೈತ್ಯರಾಜ್ ರೌಡಿಶೀಟರ್ ಆಗಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಜೊತೆ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದೆ.ಸ್ವಂತ ತಂಗಿ ಮಗಳು ಎನ್ನುವದನ್ನ ಲೆಕ್ಕಿಸದ ಕಾಮುಕ 16 ವರ್ಷದ ಅಪ್ರಾಪ್ತೆಯನ್ನ ಟ್ಯೂಷನ್ ಗೆ ಬಿಡುವುದಾಗಿ ನಂಬಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿ, ಯಾರಿಗೂ ಹೇಳಬೇಡ ಮೊಬೈಲ್ ಕೊಡಿಸುತ್ತೇನೆಂದು ಆಮಿಷ ತೋರಿಸಿ ಕೃತ್ಯ ಮರೆಮಾಚಲು ಯತ್ನಿಸಿದ್ದಾನೆ.ನಂತರ ಅತ್ಯಾಚಾರಕ್ಕೆ ಒಳಗಾದ ಬಾಲಕಿ ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.ಬಾಲಕಿಯ ತಾಯಿ ತನ್ನ ಒಡಹುಟ್ಟಿದ ಅಣ್ಣ ರಾಜೇಶ್@ದೈತ್ಯ ರಾಜ್ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *