ಮುಂದೆ ಸಿಎಂ, ಗೃಹ ಸಚಿವರ ಸಿಡಿ‌ಯೂ ಬರಬಹುದು…ರಮೇಶ್ ಜಾರಕಿಹೋಳಿ…

ಮುಂದೆ ಸಿಎಂ, ಗೃಹ ಸಚಿವರ ಸಿಡಿ‌ಯೂ ಬರಬಹುದು…ರಮೇಶ್ ಜಾರಕಿಹೋಳಿ…

ಬೆಳಗಾವಿ,ಮೇ7,Tv10 ಕನ್ನಡ

ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರದ್ದೂ ಮುಂದೆ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ‌ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯ ಗೋಕಾಕ್ ಪಟ್ಟಣದಲ್ಲಿ ಮತದಾನಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿಡಿ ವಿಚಾರವನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೆ, ಆಗ ಎಲ್ಲರೂ ನನ್ನನ್ನು ಕಡೆಗಣಿಸಿದರು, ನಗುತ್ತಾ ನೋಡುತ್ತಿದ್ದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ್ ಅವರಿಗೂ ಬರಬಹುದು ಎಂದು ವ್ಯಂಗ್ಯ ಮಾಡಿದರು.
ಪ್ರಜ್ವಲ್ ರೇವಣ್ಣ ಕೇಸು ಯಾರು ಹೆಮ್ಮೆ ಪಡುವ ವಿಷಯ ಅಲ್ಲ, ಎಲ್ಲರೂ ತಲೆ ತಗ್ಗಿಸುವ ವಿಷಯ,ಅತಿ ಕೆಟ್ಟ ಪ್ರಮಾಣದಲ್ಲಿ ಆಗಿದೆ.
ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡಬೇಕು ಎಂದು ಸಿಎಂ ಅವರಿಗರ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು
ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಡಿ.ಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿ ಹೊಳಿ, ಇದರಲ್ಲಿ ಡಿಕೆಶಿ ನೇರವಾಗಿ ಭಾಗಿಯಾಗಿರುವ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ. ನನ್ನ ಕೇಸ್‌ನಲ್ಲೂ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ, ಅದನ್ನೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದಕ್ಕೆ ಸಾಕ್ಷಿಗಳೂ ಇವೆ ಎಂದು ಹೇಳಿದರು.ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ, ಇದು ನಿಲ್ಲಬೇಕು. ನನ್ನ ಕೇಸ್‌ನಲ್ಲಿ ಡಿಕೆಶಿ ಮಾತ್ರ ಭಾಗಿಯಾಗಿಲ್ಲ, ನಮ್ಮವರೂ ಇದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ತಿಳಿಸಿದರು.ನನ್ನ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಬಗ್ಗೆ ವಿಶ್ವಾಸ ಇಲ್ಲ. ಈ ಕೇಸ್ ಅನ್ನು ಸಿಬಿಐಗೆ ಕೊಟ್ಟರೆ ಸಾಕ್ಷಿ ಕೊಡುತ್ತೇನೆ,ಆದರೆ ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೇಲುಸ್ತುವಾರಿ ಮಾಡಬೇಕು ಎಂದು ಸ್ಪಷ್ಟಪಡಿಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *