ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…

ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…

ನವದೆಹಲಿ,ಮೇ10:,Tv10 ಕನ್ನಡ

ಬಿಜೆಪಿ ಕರ್ನಾಟಕ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆ
ಮುಸ್ತಫಾ ಪೈಚಾರ್ ಬಂಧಿತ ಆರೋಪಿ ಯಾಗಿದ್ದು,ಈತನನ್ನು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ.
ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ಕೊಲೆಯ ನಂತರ ತಲೆಮರೆಸಿಕೊಂಡಿದ್ದ. ಆತನನ್ನು ಹಿಡಿಯಲು ಎನ್‌ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಎನ್‌ಐಎ ಇನ್ಸ್‌ಪೆಕ್ಟರ್ ಷಣ್ಮುಗಂ ನೇತೃತ್ವದ ಹತ್ತು ಮಂದಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮುಸ್ತಫಾ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಮತ್ತು ದಕ್ಷಿಣ ಕನ್ನಡದ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು,2022ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದಾಗ ಬೈಕಿನಲ್ಲಿ ಬಂದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.
ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *