ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡು,ಮೇ18,Tv10 ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಕಾಲರಾ ಭೀತಿ ಶುರುವಾಗಿದೆ.70 ಕ್ಕೂ ಹೆಚ್ಚು ಮಂದಿಗೆ ಕಾಲರಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.ಕಾಲರಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.ಸಿದ್ದರಾಮಯ್ಯ ತವರು ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕಾಲರಾ ಕಾಯಿಲೆ ಕಂಡುಬಂದಿದ್ದು ಗ್ರಾಮಸ್ಥರು ತತ್ತರಿಸಿದ್ದಾರೆ. ಗ್ರಾಮದ 19 ಮಕ್ಕಳು ಸೇರಿದಂತೆ ಒಟ್ಟು 76 ಮಂದಿಗೆ ಕಾಲರಾ ಕಾಣಿಸಿಕೊಂಡಿರುವುದಯ ಬೆಳಕಿಗೆ ಬಂದಿದೆ. ತಗಡೂರು ಗ್ರಾಮ ಪಂಚಾಯಿತಿಯ 1,2,3, ವಾರ್ಡಿನಲ್ಲಿ ವಾಸಿಸುತ್ತಿರುವ 300ಕ್ಕೂ ಹೆಚ್ಚು ಜನರ ಪೈಕಿ ಈಗ 76 ಜನರಿಗೆ ಕಾಲರ ಕಾಯಿಲೆ ಕಂಡು ಬಂದಿದೆ. ಗ್ರಾಮದಲ್ಲಿ 12 ಕೈ ಪಂಪುಗಳಿದ್ದು ಈ ಪೈಕಿ ನಾಲ್ಕು ಕೈ ಪಂಪುಗಳ ನೀರನ್ನು ಕುಡಿಯಲು ಯೋಗ್ಯವಿಲ್ಲ ಎಂಬ ಆತಂಕಕಾರಿ ವರದಿ ಮಾಹಿತಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮ ಎಂಬವರು ಬಡಾವಣೆಯ ಸಾರ್ವಜನಿಕರಿಗೆ ಕಲುಷಿತ ನೀರನ್ನ ಕುಡಿಯಲು ಆವಕಾಶ ಮಾಡಿಕೊಟ್ಟಿರುವುದಾಗಿ ಹೇಳಲಾಗಿದೆ. ತಗಡೂರು ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸ್ನೋರು ಹಾಗೂ ಜಿಲ್ಲಾ ಕಾಲರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ ತಾಲೂಕು ಆಡಳಿತ ವೈದ್ಯಧಿಕಾರಿ ಡಾಕ್ಟರ್ ಈಶ್ವರ್ ಖಾನಾಟ್ಕೆ ಗ್ರಾಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.ಇದೀಗ ಗ್ರಾಮಕ್ಕೆ ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಕಲ್ಪಿಸಲಾಗಿದೆ.ಹತ್ತಕ್ಕೂ ಹೆಚ್ಚು ವೈದ್ಯಾಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯ ವೈದ್ಯಾಧಿಕಾರಿಗಳ ಜೊತೆಗೂಡಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *