ತಗಡೂರು ಗ್ರಾಮಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ…ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…ಗ್ರಾಮಸ್ಥರಿಗೆ ಅಭಯ…

ತಗಡೂರು ಗ್ರಾಮಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ…ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…ಗ್ರಾಮಸ್ಥರಿಗೆ ಅಭಯ…

ನಂಜನಗೂಡು,ಮೇ21,Tv10 ಕನ್ನಡ

ನಂಜನಗೂಡು ತಾಲೂಕು ತಗಡೂರಿನಲ್ಲಿ ವಾಂತಿ ಭೇದಿ ಕಾಣಿಸಿಕೊಂಡು ಗ್ರಾಮದಲ್ಲಿ ಆತಂಕ ಶುರುವಾದ ಹಿನ್ನೆಲೆ
ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ದಿಡೀರ್ ಭೇಟಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು.
ಸುಮಾರು 114 ಹೆಚ್ಚು ರೋಗಿಗಳಿಗೆ ವಾಂತಿಬೇದಿಗೆ ರೋಗ ಕಾಣಿಸಿಕೊಂಡಿತ್ತು.
ಮೂವರಿಗೆ ಕಾಲರಾ ಬಂದಿದೆ.ಈ ಹಿನ್ನೆಲೆಯಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆನಡೆಸಿದ್ದಾರೆ.
ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕಾಲರಾ ರೋಗದ ಬಗ್ಗೆ
ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಗ್ರಾಮದಲ್ಲಿ ಈಗಾಗಲೇ ನಾಲ್ಕಕ್ಕೂ ಹೆಚ್ಚು ಹೊಸದಾಗಿ ಬೋರ್ವೆಲ್ ಕೊರೆಸಲಾಗುತ್ತಿದೆ. ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯವನ್ನು ವಿಚಾರಿಸಿ ಆದಷ್ಟು ಗ್ರಾಮದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಇನ್ನೂ ರೋಗಿಗಳ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸ ಧೈರ್ಯವಾಗಿ ಇರಿ ನಾವು ನಿಮ್ಮೊಂದಿಗೆ ಸದಾ ಇರುತ್ತೇವೆ ಅಭಯ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕುಮಾರಸ್ವಾಮಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಈಶ್ವರ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *