ಕಾರಿಗೆ ಸಿಲುಕಿ ಮಹಿಳೆ ಸಾವು…ಆತ್ಮಹತ್ಯೆ ಶಂಕೆ…

ಹುಣಸೂರು,ಮೇ24,Tv10 ಕನ್ನಡ

ಚಲಿಸುತ್ತಿದ್ದ ಕಾರಿಗೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಣಸೂರಿನ ಜಡಗನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಮಹಿಳೆ ಸಾವು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.ಜಡಗನಕೊಪ್ಪಲು ಮುಖ್ಯರಸ್ತೆಯ ಮಧ್ಯದಲ್ಲಿ ನಿಂತ ಮಹಿಳೆ ಭಾರಿ ವಾಹನಗಳಿಗೆ ಸಿಲುಕಲು ಯತ್ನಿಸುತ್ತಿದ್ದಳೆಂದು ಹೇಳಲಾಗಿದೆ.ಲಾರಿಯೊಂದಕ್ಕೆ ಸಿಲುಕಬೇಕಿದ್ದ ಮಹಿಳೆ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿಸಿಕೊಂಡಿದ್ದಾಳೆ.ನಂತರ ಹಿಂದೆಯೇ ಬರುತ್ತಿದ್ದ ಕಾರಿಗೆ ಉದ್ದೇಶಪೂರ್ವಕವಾಗಿ ಸಿಲುಕಿ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದೆ.ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರನ್ನ ವಶಕ್ಕೆ ಪಡೆದಿದ್ದಾರೆ.ಮೃತಪಟ್ಟ ಮಹಿಳೆಯ ಮಾಹಿತಿ ಕಲೆಹಾಕಲು ಪೊಲೀಸರು ಮುಂದಾಗಿದ್ದಾರೆ.ಪ್ರತ್ಯಕ್ಷದರ್ಶಿಯೊಬ್ಬರು ಮಹಿಳೆಯ ಈ ಯತ್ನವನ್ನ ನೋಡಿರುವುದಾಗಿ ತಿಳಿದು ಬಂದಿದೆ.ಅಲ್ಲದೆ ಈ ವಿಚಾರವನ್ನ 112 ಪೊಲೀಸ್ ವಾಹನಕ್ಕೂ ಮುಟ್ಟಿಸಿದ್ದಾರೆಂದು ಹೇಳಲಾಗಿದೆ.ಮಹಿಳೆಯ ಸಾವು ಆಕಸ್ಮುಕವೋ ಅಥವಾ ಆತ್ಮಹತ್ಯೆಯೋ ತನಿಖೆಯಲ್ಲಿ ಖಚಿತಪಡಿಸಬೇಕಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *