ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಮೈಸೂರು,ಮೇ25,Tv10 ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ವರ್ಷದ ವರ್ಧಂತಿ ಹಿನ್ನಲೆ ಇಂದು ವಿಶೇಷಚೇತನರಿಗೆ ಉಪಕರಣ‌ಗಳನ್ನ ವಿತರಣೆ ಮಾಡಲಾಯಿತು.
ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣಪತಿ ಶ್ರೀಗಳು ವಿಶೇಷ ಆರೋಗ್ಯ ವಿಚಾರಿಸಿ ಸಲಕರಣೆ ವಿತರಿಸಿದರು.
ಈ‌ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಯವರು ವಿಶೇಷ ಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶೀರ್ವದಿಸಿದರು.40 ವ್ಹೀಲ್‌ಚೇರ್ಸ್,8ವಾಕರ್ಸ್,10ಕ್ರಚರ್ಸ್,5 ಸ್ಟಿಕ್ ಗಳು ಸೇರಿ ಒಟ್ಟು 82 ಉಪಕರಣಗಳನ್ನು ವಿಕಲಚೇತನರಿಗೆ ಶ್ರೀಗಳು ವಿತರಿಸಿದರು.ನಂತರ ನಾದಮಂಟಪದ 26 ನೇ ವಾರ್ಷಿಕೋತ್ಸವ ಮತ್ತು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ಜನ್ಮದಿನೋತ್ಸವ ಪ್ರಯುಕ್ತ ಅವಧೂತ ದತ್ತ ಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ನಾದಮಂಟಪದಲ್ಲಿ ಲೋಕ ಕಲ್ಯಾಣಾರ್ಥವಾಗಿ‌ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿಯ ಶಾಂತಿ ಕಲ್ಯಾಣ ವೈಭವವಾಗಿ ನೆರವೇರಿತು.
ಶ್ರೀ ದತ್ತ ವಿಜಯಾನಂದ ಶ್ರೀಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನೆರವೇರಿದವು. ನಂತರ ‌ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *