ಸಚಿವ ನಾಗೇಂದ್ರ ರಾಜೀನಾಮೆ…ಅಕ್ರಮ ಆರೋಪಕ್ಕೆ ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ…

ಸಚಿವ ನಾಗೇಂದ್ರ ರಾಜೀನಾಮೆ…ಅಕ್ರಮ ಆರೋಪಕ್ಕೆ ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ…

ಸಚಿವ ನಾಗೇಂದ್ರ ರಾಜೀನಾಮೆ…ಅಕ್ರಮ ಆರೋಪಕ್ಕೆ ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ…

ಬೆಂಗಳೂರು,ಜೂ6,Tv10 ಕನ್ನಡ

ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನಲೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.ಈ ಸಂಬಂಧ ನಾಗೇಂದ್ರ ಮುಖ್ಯಮಂತ್ರಿಗಳಿಗೆ ಸಂಜೆ ರಾಜೀನಾಮೆ ಸಲ್ಲಿಸಲಿದ್ದಾರೆ.ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದೆ. ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಇಂದು ಸಂಜೆ ೭.೩೦ರ ನಂತರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅವರಿಗೆ ನನ್ನ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದರು.
ಯಾರಿಗೂ ಮುಜುಗರ ಆಗಬಾರದು ಎಂಬ ಹಿನ್ನೆಲೆಯಲ್ಲಿ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ನಾಗೇಂದ್ರ ತಿಳಿಸಿದರು.
ಎಸ್ ಐಟಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ. ನಾನು ಸಚಿವ ಸ್ಥಾನದಲ್ಲಿ ಇದ್ದರೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು.
ಈ ಹಗರಣದಲ್ಲಿ ನಾನು ಭಾಗಿ ಆಗಿಲ್ಲ. ತನಿಖೆ ನಂತರ ನಾನು ನಿರ್ದೋಷಿ ಆಗಿ ಹೊರಬರುತ್ತೇನೆ ಎಂದು ನಾಗೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮ ಅಳಿಯ ಈ ಹಗರಣದಲ್ಲಿ ಭಾಗಿ ಆಗಿದ್ದಾರೆಂಬ ಆರೋಪ ಕೇಳಿ ಬರುತ್ತಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ನಾಗೇಂದ್ರ ಅವರು ಉತ್ತರಿಸಿ, ಇದೆಲ್ಲ ಊಹಾಪೋಹ ಎಂದಷ್ಟೆ ಹೇಳಿದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *