ಜೂನ್ 21 ವಿಶ್ವಯೋಗ ದಿನಾಚರಣೆ… ಅರ್ಥಪೂರ್ಣವಾಗಿ ಆಚರಣೆ…ಸಂಸದ ಯದುವೀರ್.

ಜೂನ್ 21 ವಿಶ್ವಯೋಗ ದಿನಾಚರಣೆ… ಅರ್ಥಪೂರ್ಣವಾಗಿ ಆಚರಣೆ…ಸಂಸದ ಯದುವೀರ್.

  • Mysore
  • June 14, 2024
  • No Comment
  • 150

ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಅರಮನೆ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತರಾಜ್ ಒಡೆಯರ್ ಅವರು ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾನು ಪ್ರತಿ ವರ್ಷ ಯೋಗ ದಿನಾಚರಣೆ ಯಲ್ಲಿ ಭಾಗವಹಿಸುತ್ತೇನೆ. ಸರ್ಕಾರದಿಂದ ನೀಡಿರುವ 1 ಲಕ್ಷ ಅನುದಾನದ ಜೊತೆಗೆ ವಿವಿಧ ದಾನಿಗಳಿಂದ ಅನುದಾನವನ್ನು ಪಡೆದು ಸದ್ಬಳಕೆ ಮಾಡಿ ಯೋಗ ದಿನಾಚರಣೆ ಆಯೋಜನೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಮೈಸೂರಿನ ಯೋಗವು ವಿಶ್ವದಲ್ಲೇ ಪ್ರಸಿದ್ಧಿ ಪಡೆದಿದೆ. ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟಕ್ಕೆ ಯೋಗ ದಿನಾಚರಣೆ ಆಯೋಜನೆಗೆ 1 ಲಕ್ಷ ಅನುದಾನ ಬರುತ್ತದೆ. ಯೋಗವನ್ನು ಅರಮನೆಯ ಮುಂಭಾಗದಲ್ಲಿ ಆಯೋಜನೆ ಮಾಡಲಾಗುವುದು. ಅಂದು ಬೆಳಿಗ್ಗೆ 7 ಗಂಟೆಗೆ ಯೋಗ ಪ್ರಾರಂಭವಾಗುವುದು. ಕನಿಷ್ಠ 10 ಸಾವಿರ ಯೋಗಪಟುಗಳು ಭಾಗವಹಿಸುವರು ಎಂದರು.

ಸರ್ಕಾರದ ಶಿಷ್ಟಾಚಾರ ಪಾಲನೆ ಮಾಡಿ ಯೋಗ ದಿನಾಚರಣೆಯನ್ನು ಆಯೋಜನೆ ಮಾಡಲಾಗುವುದು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಗ್ಗೆ 6.30 ಕ್ಕೆ ಪ್ರಾರಂಭವಾಗುವುದು. ಅಚ್ಚುಕಟ್ಟಾಗಿ ಯೋಗ ದಿನಾಚರಣೆ ಆಯೋಜನೆಗೆ ವಿವಿಧ ಇಲಾಖೆಗಳಿಗೆ ನಿಯೋಜಿಸುವ ಕಾರ್ಯಗಳನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…
ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ…

ವ್ಯಕ್ತಿ ಭೀಕರ ಕೊಲೆ…ಮಾರಕಾಸ್ತ್ರಗಳಿಂದ ದಾಳಿ…6 ಮಂದಿ ಗ್ಯಾಂಗ್ ನಿಂದ ಕೃತ್ಯ…ಅಕ್ರಮ ಸಂಬಂಧ ಶಂಕೆ… ಮೈಸೂರು,ಅ4,Tv10 ಕನ್ನಡ ಮೈಸೂರಿನ ಗೋಕುಲಂನಲ್ಲಿ ಜನರ ತಂಡ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…

Leave a Reply

Your email address will not be published. Required fields are marked *