ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

ಸೆರೆಯಾದ ಚಿರತೆ ಜೊತೆ ಸೆಲ್ಫಿಗೆ ಯತ್ನ…ಯುವಕನ ಮೇಲೆ ದಾಳಿ ನಡೆಸಿದ ಚಿರತೆ…ಕೆ.ಆರ್.ಆಸ್ಪತ್ರೆಗೆ ದಾಖಲು…

  • Mysore
  • June 23, 2024
  • No Comment
  • 581

ಪಾಳು ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನ ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ಸೆರೆಯಾದ ಚಿರತೆ ಜೊತೆ ಸೆಲ್ಫಿ ಕಿಕ್ಕಿಸಲು ಯತ್ನಿಸಿದ ಯುವಕನ ಮೇಲೆ ದಾಳಿ ನಡೆಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಯುವಕನನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡು ತಾಲೂಕು ಯಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಸಾಕು ಪ್ರಾಣಿಗಳನ್ನ ಬಲಿ ಪಡೆಯುತ್ತಿದ್ದ ಚಿರತೆ ಮಹದೇವಪ್ಪ ಎಂಬುವರಿಗೆ ಸೇರಿದ ಪಾಳು ಬಿದ್ದ ಮನೆಯಲ್ಲಿ ಅಡಗಿ ಕುಳಿತಿದೆ.ಹೊರಬರಲು ಸಾಧ್ಯವಾಗದಂತೆ ಸಂಪೂರ್ಣವಾಗಿ ಪಾಳು ಮನೆಯಲ್ಲಿ ಕೂಡಿಹಾಕಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆರ್‌ಎಫ್ಓ ನಿತಿನ್ ಕುಮಾರ್ ಮತ್ತು ಜನಾರ್ಧನ್ ರವರ ತಂಡ ಸ್ಥಳಕ್ಕೆ ಧಾವಿಸಿದೆ. ಸುಮಾರು ಎರಡು ಗಂಟೆಗಳ ಕಾಲ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.ಅರವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಈ ವೇಳೆ ಸೆರೆಯಾದ ಚಿರತೆ ಬಳಿ ಬಂದ ಸ್ಥಳೀಯ ಯುವಕ ಜಯಶಂಕರ್ ಸೆಲ್ಫೀ ತೆಗೆಯಲು ಯತ್ನಿಸಿದ್ದಾನೆ.


ಈ ಸಂಧರ್ಭದಲ್ಲಿ ಚಿರತೆ ಯುವಕನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.ಚಿರತೆ ದಾಳಿಯಿಂದ ಗಾಯಗೊಂಡ ಜಯಶಂಕರ್ ನನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆರೆಯಾಗಿರುವ ಗಂಡು ಚಿರತೆಗೆ ನಂಜನಗೂಡಿನ ನರ್ಸರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಡಿಸಿಎಫ್ ಬಸವರಾಜ್ ರವರ ಆದೇಶದ ಮೇರೆಗೆ ಚೇತರಿಸಿಕೊಂಡ ಬಳಿಕ ಮತ್ತೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.
ಕಾರ್ಯಚರಣೆಯಲ್ಲಿ ಆರ್‌ಎಫ್‌ಒ ನಿತಿನ್ ಕುಮಾರ್ ಜನಾರ್ಧನ್ ಚೇತನ್ ಕುಮಾರ್ ಸೇರಿದಂತೆ ಸಾಕಷ್ಟು ಸಿಬ್ಬಂದಿಗಳು ಭಾಗವಹಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *