• Mysore
  • June 27, 2024
  • No Comment
  • 165

ನಾಡಪ್ರಭು ಕೆಂಪೇಗೌಡ ಜಯಂತಿ ಸಂಭ್ರಮ… 2000 ಹೋಳಿಗೆ ವಿತರಣೆ…

ಮೈಸೂರು,ಜೂ27,Tv10 ಕನ್ನಡ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಹೋಳಿಗೆ ವಿತರಣೆ ಮಾಡಲಾಯಿತು.  515 ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯ ಮೆರವಣಿಗೆಯ ವೇಳೆ 2,000 ಹೋಳಿಗೆಯನ್ನು   ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ವಿತರಿಸಿದರು. ಕೆಂಪೇಗೌಡರು ಒಕ್ಕಲಿಗ ಸಮುದಾಯದ ಪ್ರಭುಗಳಾಗಿದ್ದರೂ ಸಹ ಒಂದೇ ಸಮುದಾಯಕ್ಕೆ ಸೀಮೀತವಾದವರಲ್ಲ ಎಂಬುದಕ್ಕೆ ಅವರು ಕಟ್ಟಿದ ಬೆಂಗಳೂರು ನಗರವೇ ಸಾಕ್ಷಿ. ಪ್ರತಿಯೊಂದು ಸಮುದಾಯದ ಜನರಿಗೂ ಒಂದೊಂದು ಕೇರಿಯನ್ನು ಸಮುದಾಯದ ಹೆಸರಿನಲ್ಲೇ ಕಟ್ಟಿಕೊಟಿದ್ದಾರೆ.
ಕೆಂಪೇಗೌಡ ಅವರು ನಡೆಸಿದ ರಾಜಾಡಳಿತವೂ ಇತರ ರಾಜರಿಗೆ ಮಾದರಿಯಾಗಿದ್ದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಇಂತಹ ಮಹಾನ್ ನಾಯಕರು ನೆಲೆಸಿದ ನಾಡಿನಲ್ಲಿ ಬದುಕುತ್ತಿರುವ ನಾವುಗಳೇ ಪುಣ್ಯವಂತರು ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಸ್ಮರಿಸಿದರು.

ಈ ವೇಳೆ ಶಾಸಕರಾದ ಜಿ ಟಿ ದೇವೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮರಿಗೌಡ, ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮೂಡ ಮಾಜಿ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಹೇಮಂತ್ ಕುಮಾರ್ ಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್,
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,
ಇಂದ್ರ ಗಾಂಧಿ ಬ್ಲಾಕ್ ಅಧ್ಯಕ್ಷರಾದ ಮಂಚೇಗೌಡನ ಕೊಪ್ಪಲು ರವಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಒಕ್ಕಲಿಗರ ಸಂಘದ ಕಾರ್ಯದರ್ಶಿ ಚೇತನ್ ಗೌಡ, ಆನಂದ್, ಸೂರಜ್, ಸದಾಶಿವ್, ಗಿರೀಶ್ ಗೌಡ , ಒಕ್ಕಲಿಗ ಸಂಘದ ನಿರ್ದೇಶಕರುಗಳು  ಮುಖಂಡರು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *