ವಿಶ್ವಹಾವುಗಳ ದಿನಾಚರಣೆ…ಉರಗತಜ್ಞ ಸ್ನೇಕ್ ಶ್ಯಾಂಗೆ ಅಭಿನಂದನೆ…
- MysoreNews
- July 16, 2024
- No Comment
- 101
ಮೈಸೂರು,ಜು16,Tv10 ಕನ್ನಡವಿಶ್ವ ಹಾವು ಗಳ ದಿನಾಚರಣೆ ಅಂಗವಾಗಿ ಉರಗ ತಜ್ಞ ಸ್ನೇಕ್ ಶ್ಯಾಂ ಗೆ ಇಂದು ಅಭಿನಂದಿಸಿ ಗೌರವಿಸಲಾಯಿತು. 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿರುವ ಹೆಗ್ಗಳಿಕೆ ಉರುಗ ತಜ್ಞ ಸ್ನೇಕ್ ಶಾಮ್ ರವರದ್ದು.ಹೀಗಾಗಿ
ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂ ನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವು ಗಳ ದಿನಾಚರಣೆಯನ್ನ ಸ್ನೇಕ್ ಶ್ಯಾಂ ರವರನ್ನ ಅಭಿನಂದಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸ್ನೇಕ್ ಶ್ಯಾಮ್
ಉರಗ ಸಂತತಿಯ ಉಳಿವು ಮುಖ್ಯ
ಪರಿಸರ ಸಮತೋಲನಕ್ಕೆ ಉರಗ ಸಂತತಿಯ ಉಳಿವೂ ಮುಖ್ಯ ,ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಉಪಯುಕ್ತ ಸ್ಥಳದಲ್ಲಿಯೇ ಗಿಡಗಳನ್ನು ನೆಟ್ಟು ಬೆಳೆಸಬೇಕು. ಆ ಮೂಲಕ ಪರಿಸರವನ್ನು ಶುದ್ಧವಾಗಿಸುವ ಅಲ್ಪ ಸೇವೆಯನ್ನು ಮಾಡಿದಂತಾಗುತ್ತದೆ. ಪರಿಸರದಲ್ಲಿರುವ ಪ್ರತಿಯೊಂದು ಜೀವಿಯೂ ಒಂದನ್ನೊಂದು ಅವಲಂಬಿಸಿಯೇ ಬದುಕುವ ಕಾರಣ ಪ್ರತಿಯೊಂದಕ್ಕೂ ಪ್ರಾಮುಖ್ಯತೆಯಿದೆ. ಎಲ್ಲವನ್ನೂ ಗೌರವಿಸಿ ಎಂದು ಸಲಹೆ ನೀಡಿದರು.ಉರಗ ಪ್ರಭೇದಗಳು, ಅವುಗಳ ಸಂತತಿ, ಹಾವಿನ ಕಡಿತದ ಬಳಿಕ ನಡೆಸುವ ಪ್ರಥಮ ಚಿಕಿತ್ಸೆಗಳ ಕುರಿತು ಮಾಹಿತಿ ನೀಡಿದರು.ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ನಜರಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ,ಪ್ರಕಾಶ್ ಪ್ರಿಯದರ್ಶನ್, ಪರಮೇಶ್ ಗೌಡ,
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಅಪೂರ್ವ ಸುರೇಶ್, ಬೈರತಿ ಲಿಂಗರಾಜು, ಸುಚಿಂದ್ರ, ಚಕ್ರಪಾಣಿ, ಎಸ್ ಎನ್ ರಾಜೇಶ್, ಸದಾಶಿವ್, ಸಚಿನ್ ನಾಯಕ್, ಸಫಿ, ರಾಕೇಶ್, ಹಾಗೂ ಇನ್ನಿತರರು ಹಾಜರಿದ್ದರು…