ಜಮೀನಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ…ಕೊಲೆ ಶಂಕೆ…
- CrimeMysoreNews
- July 20, 2024
- No Comment
- 199
ಪಿರಿಯಾಪಟ್ಟಣ,ಜು20,Tv10 ಕನ್ನಡ
ಯುವಕನ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.ದುಷ್ಕರ್ಮಿಗಳು ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಸಲುವಾಗಿ ಸುಟ್ಟುಹಾಕಿ ನಂತರ ಜಮೀನಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ನಾಗರತ್ನಮ್ಮ ಎಂಬುವರ ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮೃತನ ಬಲಗೈನಲ್ಲಿ ಶಶಿಕುಮಾರ ಎಂಬ ಅಚ್ಚೆ ಗುರುತಿದೆ.ಕುತ್ತಿಗೆಯನ್ನ ಮಾರಕಾಸ್ತ್ರದಿಂದ ಕೊಚ್ಚಿಹಾಕಿರುವ ಗುರುತು ಕಂಡು ಬಂದಿದೆ.ಎಡಬುಜದ ಬಳಿ ಶಸ್ತ್ರಚಿಕಿತ್ಸೆ ಮಾಡಿ ರಾಡ್ ಹಾಕಿರುವ ಗುರುತು ಸಹ ಇದೆ.ಸ್ಥಳಕ್ಕೆ ಬೆಟ್ಟದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತನ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿಲ್ಲ.ಮಾಹಿತಿ ಇದ್ದಲ್ಲಿ ಬೆಟ್ಟದಪುರ ಠಾಣೆ ಪೊಲೀಸರಿಗೆ ತಿಳಿಸುವಂತೆ ಪ್ರಕಟಣೆ ಹೊರಡಿಸಿದ್ದಾರೆ…