
ರೈತನ ಮೇಲೆ ಚಿರತೆ ದಾಳಿ…ಆಸ್ಪತ್ರೆಗೆ ದಾಖಲು…
- TV10 Kannada Exclusive
- August 3, 2024
- No Comment
- 107
ನಂಜನಗೂಡು,ಆ3,Tv10 ಕನ್ನಡ
ಜಮೀನಿನಲ್ಲಿ ಮೇವು ಕಟಾವು ಮಾಡಲು ತೆರಳಿದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವಣ್ಣ ಚಿರತೆ ದಾಳಿಗೆ ಸಿಲುಕಿ ಗಾಯಗೊಂಡ ರೈತ. ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಮತ್ತು ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದೆ.ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ…