ರಾಜಕಾರಣವನ್ನು ಉದ್ಯೋಗ ಮಾಡಿಕೊಳ್ಳುವ ಪರಿಪಾಠ ಅಪಾಯಕಾರಿ…ಸಾ.ರಾ.ಮಹೇಶ್…

ರಾಜಕಾರಣವನ್ನು ಉದ್ಯೋಗ ಮಾಡಿಕೊಳ್ಳುವ ಪರಿಪಾಠ ಅಪಾಯಕಾರಿ…ಸಾ.ರಾ.ಮಹೇಶ್…

ಮೈಸೂರು,ಆ6,Tv10 ಕನ್ನಡನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ನ ವತಿಯಿಂದ ನಗರದ ರುಚಿ ದಿ ಪ್ರಿನ್ಸ್ ಹೋಟೆಲ್ ನಲ್ಲಿ ಉದ್ಯಮಿ ಹಾಗೂ ವೃತ್ತಿಪರರ ಸಮ್ಮಿಲನ ಕಾರ್ಯಕ್ರಮಆಯೋಜಿಸಲಾಗಿತ್ತು.ಮಾಜಿ ಸಚಿವ ಸಾ.ರಾ.ಮಹೇಶ್ ಕಾರ್ಯಕ್ರಮವನ್ನ ಉದ್ಘಾಟಿಸಿದರು.ನಂತರ ಮಾತನಾಡಿ ಉದ್ಯೋಗ ಮತ್ತು ರಾಜಕಾರಣವನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಬೇಕಾದ ಅವಶ್ಯಕತೆ ಇದೆ. ರಾಜಕಾರಣಿಗಳು ಜೀವನೋಪಾಯಕ್ಕೆ ಒಂದು ಉದ್ಯೋಗವನ್ನು ಆಶ್ರಯಿಸಿ ಇದರಿಂದ ಪ್ರತ್ಯೇಕವಾಗಿ ರಾಜಕಾರಣ ಮಾಡುವುದನ್ನು ಒಂದು ಸೇವೆಯನ್ನಾಗಿ ರೂಢಿ ಮಾಡಿಕೊಳ್ಳಬೇಕು. ಆದರೆ ಬಹಳಷ್ಟು ಜನರು ರಾಜಕಾರಣವನ್ನೇ ತಮ್ಮ ಉದ್ಯೋಗ ವನ್ನಾಗಿ ಮಾಡಿಕೊಂಡು ಅದನ್ನೇ ತಮ್ಮ ಸಂಪಾದನೆಯ ಮಾರ್ಗವನ್ನಾಗಿಸಿಕೊಂಡು ಅಮಾಯಕರನ್ನು ಶೋಷಿಸುತ್ತಾ ಸಮಾಜಕ್ಕೆ ಕಂಟಕರಾಗುತ್ತಿದ್ದಾರೆ. ಇದರಿಂದಾಗಿ ಸಾಮಾನ್ಯ ಜನರಲ್ಲಿ ರಾಜಕಾರಣಿಗಳ ಬಗ್ಗೆ ಅಸಹನೆಯ ಭಾವನೆ ಹೆಚ್ಚಾಗುತ್ತಿದೆ ಎಂದು ವಿಷಾಧಿಸಿದರು.
ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಸಮಾಜದ ಬಾಂಧವರ ಕಲ್ಯಾಣಕ್ಕಾಗಿ ಹಾಗೂ ಸಾಮರಸ್ಯ ಸಮುದಾಯದ ನಿರ್ಮಾಣಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡು ಅವುಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಮೂಲಕ ಸಮಾಜದ ಎಲ್ಲ ವರ್ಗಗಳ ಜನರಿಗೆ ಸೇವೆ ನೀಡುತ್ತಿದೆ.
ಮೈಸೂರು ಮಾತ್ರವಲ್ಲದೆ ಮಂಡ್ಯ ಬೆಂಗಳೂರು ರಾಮನಗರ ಹಾಸನ ಮತ್ತಿತರ ಜಿಲ್ಲೆಗಳಲ್ಲಿಯೂ ಶಾಖೆಗಳನ್ನು ತೆರೆಯುವ ಮೂಲಕ ಸಮುದಾಯದ ಒಳಿತಿಗೆ ಶ್ರಮಿಸುತ್ತಿದೆ. ಹಿಂದಿನಿಂದಲೂ ಸಂಸ್ಥೆಯ ಎಲ್ಲಾ ಉತ್ತಮ ಕಾರ್ಯಗಳಿಗೆ ಸಹಕಾರ ನೀಡುತ್ತಾ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿಯೂ ಸಂಸ್ಥೆ ಹಮ್ಮಿಕೊಳ್ಳುವ ಎಲ್ಲಾ ರಚನಾತ್ಮಕ ಕಾರ್ಯಗಳಿಗೆ ಇನ್ನೂ ಹೆಚ್ಚಿನ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.ಮೈಸೂರು ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಪಿ ವಿಶ್ವನಾಥ್, ಮೈಸೂರು ಮೂಡ ಮಾಜಿ ಅಧ್ಯಕ್ಷ ಯಶಸ್ವಿನಿ ಸೋಮಶೇಖರ್ ,ಕೆ ಎ ಎಸ್ ಎಸ್ ಎಫ್ ಐ ಜಂಟಿ ನಿರ್ದೇಶಕ ಸತೀಶ್ ,ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಮಂಜೇಗೌಡ ,ಗಂಗಾಧರ ಗೌಡ , ಡಾ.ಮೀನಾಕುಮಾರಿ ,ಡಾ. ಎಸ್ ಯಶಸ್ವಿನಿ , ಮಂಜುನಾಥ್ , ನಿಂಗರಾಜು , ಶಿವಶಂಕರ್ ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಉದ್ಯಮಿಗಳು, ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಶೋಭ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *