ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ನಂಜನಗೂಡು,ಆ17,Tv10 ಕನ್ನಡ

ತಾಯಿಯನ್ನ ಕೊಲೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯನ್ನ ಅತ್ಯಾಚಾರವೆಸಗಿ ಆಕೆಯ ಬೆತ್ತಲೆ ಫೋಟೋಗಳನ್ನ ವೈರಲ್ ಮಾಡಿದ ಖದೀಮ ಯುವಕನನ್ನ ನಂಜನಗೂಡು ಟೌನ್ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಆದರ್ಶ್ ಬಂಧಿತ ಖದೀಮ.15 ವರ್ಷದ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿ ಕೃತ್ಯವೆಸಗಿದ್ದಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ಸೆಂಡ್ ಮಾಡಿದ್ದಾನೆ.

ಖಾಸಗಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್ ನಲ್ಲಿ ಫಾಲೋ ಮಾಡಿ ಆಕೆಯನ್ನ ಒಲಿಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ.ಆದರ್ಶ್ ಪ್ರಯತ್ನಕ್ಕೆ ಸ್ಪಂದಿಸದಿದ್ದಾಗ ಹೇಳದಂತೆ ಕೇಳದಿದ್ದರೆ ನಿನ್ನ ತಾಯಿಯನ್ನ ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ.ಆದರ್ಶ್ ನ ಬೆದರಿಕೆಗೆ ಹೆದರಿದ ಬಾಲಕಿ ಕರೆದೆಡೆಗೆ ಹೋಗಿದ್ದಾಳೆ.ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರವೆಸಗಿದ್ದಾನೆ.ಅಲ್ಲದೆ ಆಕೆಯ ಬೆತ್ತಲೆ ಫೋಟೋಗಳನ್ನ ಶಾಲೆಯ ಮುಖ್ಯಸ್ಥರಿಗೆ ರವಾನಿಸಿದ್ದಾನೆ.ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನ ಕರೆದು ಮಾಹಿತಿ ನೀಡಿದ್ದಾರೆ.ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಆದರ್ಶ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅತ್ಯಾಚಾರವೆಸಗಿದ ಆದರ್ಶನ್ ನನ್ನು ಬಂಧಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *