ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಮೈಸೂರು,ಆ18,Tv10 ಕನ್ನಡದತ್ತ ಪೀಠದ ಆವರಣದಲ್ಲಿರುವ ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಆಗಸ್ಟ್ 8 ರಿಂದಆರಂಭವಾಗಿದ್ದ ಸಂಪೂರ್ಣ ಶ್ರೀಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಮಹಾ ಪೂರ್ಣಾಹುತಿ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದರು.ಪ್ರತಿಯೊಬ್ಬರೂ ಒಮ್ಮೆಯಾದರೂ ಸಂಪೂರ್ಣ ರಾಮಾಯಣ ಪಾರಾಯಣ ಮಾಡಬೇಕು.ಭಾರತ ಅಷ್ಟೇ ಅಲ್ಲ ಇಡೀ ಪ್ರಪಂಚದಲ್ಲಿ ಶ್ರೀರಾಮ ಎಂಬ ಹೆಸರು ಕೇಳಿದರೆ ಸಾಕು ಮೈ ನವಿರೇಳುತ್ತದೆ.
ಲೋಕಕಲ್ಯಾಣಾರ್ಥವಾಗಿ ಮತ್ತು ವಿಶ್ವಶಾಂತಿಗಾಗಿ ಪ್ರಾರ್ಥಿಸಿ 11 ದಿನಗಳಿಂದ ಸಂಪೂರ್ಣ ರಾಮಾಯಣ ಪಾರಾಯಣ ಮಾಡಲಾಗಿದೆ.ನಮ್ಮ ಕರ್ನಾಟಕ,ನಮ್ಮ ದೇಶ ಹಾಗೂ ವಿಶ್ವದೆಲ್ಲೆಡೆ ಸದಾ ಶಾಂತಿ ಇರಬೇಕು ಎಂದು ಪ್ರಾರ್ಥಿಸಿದ್ದೇವೆ.ಎಲ್ಲೆಡೆ‌ ಕಷ್ಟದ ವಾತಾವರಣ,ಯುದ್ಧದ ವಾತಾವರಣ ಕಾಡುತ್ತಿದೆ ಇದೆಲ್ಲ ಹೋಗಬೇಕೆಂದು ಸಂಕಲ್ಪ ಮಾಡಲಾಗಿದೆ. ಶ್ರೀ ರಾಮ ಸೀತಾ ಮಾತಾ, ಆಂಜನೇಯ‌ ಸ್ವಾಮಿ ಎಲ್ಲರಿಗೂ ಅನುಗ್ರಹ ನೀಡಲಿ ಎಂದು ಶ್ರೀಗಳು ಹಾರೈಸಿದರು.ಕಳೆದ ಎರಡು ವರ್ಷಗಳ ಹಿಂದೆ ಇಡೀ ನಾಡಿನಲ್ಲಿ ಕೊರೊನಾ ಬಾಧಿಸುತ್ತಿದ್ದಾಗ ರಾಮಾಯಣ ಪಾರಾಯಣ ಮಾಡಿಸಬೇಕು ಎಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಅಂದುಕೊಂಡಿದ್ದರು.
ಪ್ರಾರಂಭದಲ್ಲಿ ಕೆಲ ವಿಘ್ನಗಳು ಬರಲಿದೆ ಎಂದು ಕೂಡ ಶ್ರೀಗಳು ತಿಳಿಸಿದ್ದರು.ನಾನು ಒಳಗೆ ರಾಮಾಯಣ ಪಾರಾಯಣ ಮಾಡಿಕೊಳ್ಳುತ್ತೇನೆ ನೀವು ಮುಂದೆ ಮಾಡಿ ಎಲ್ಲಾ ಸರಿಯಾಗಲಿದೆ ಎಂದು ಹೇಳಿದ್ದರು. ಅದರಂತೆ ಈಗ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ರಾಮಾಯಣ ಪಾರಾಯಣ ಆಗಿದೆ ಇದಕ್ಕೆ ಈ ಎಲ್ಲ‌ ಹೃತ್ವಿಕರು ಮುಖ್ಯ ಕಾರಣ ಎಂದು ತಿಳಿಸಿದರು.ಇಲ್ಲಿಗೆ ರಾಮಾಯಣ ಪಾರಾಯಣ ಹಾಗೂ ಶ್ರೀ ಮದ್ರಾಮಾಯಣ ಯಾಗ ಎರಡೂ ಯಶಸ್ವಿಯಾಗಿದೆ, 24,000 ಆಹುತಿಗಳನ್ನು ಸಮರ್ಪಣೆ ಮಾಡಲಾಗಿದೆ ಶ್ರೀರಾಮ ಜಯರಾಮ ಜಯ ಜಯ ರಾಮ ಮಂತ್ರವನ್ನು 52 ಲಕ್ಷ ಪೂರ್ತಿ ಮಾಡಲಾಗಿದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಆಶ್ರಮದ ವಿಶ್ವ ಪ್ರಾರ್ಥನಾ ಮಂದಿರದಿಂದ ಸೀತಾರಾಮ ಆಂಜನೇಯ ಸಮೇತ ಉತ್ಸವ ಮೂರ್ತಿಯನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿ ವರೆಗೆ ತರಲಾಯಿತು ಶ್ರೀಗಳು ಈ ಉತ್ಸವ ಮೂರ್ತಿಗಳಿಗೆ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *