ಗಜಪಯಣಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಚಾಲನೆ…
- MysoreTV10 Kannada Exclusive
- August 21, 2024
- No Comment
- 85
ಮೈಸೂರು,ಅ21,Tv10 ಕನ್ನಡನಾಡಹಬ್ಬ ದಸರಾ ಮಹೋತ್ಸವದ ಮೊದಲ ಆಕರ್ಷಣೆಯಾದ ಗಜಪಡೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.
ಜಿಲ್ಲೆಯ ಹುಣಸೂರು ತಾಲ್ಲೂಕು ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿ ಅಭಿಮನ್ಯು ನೇತೃತ್ವದ 9 ಗಜ ಪಡೆ ಬುಧವಾರ ಮೈಸೂರಿನತ್ತ ತೆರಳಿತು.ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಮೊದಲ ಹಂತದಲ್ಲಿ ಒಟ್ಟು 9 ಆನೆಗಳು ಗಜಪಯಣದ ಮೂಲಕ ಮೈಸೂರಿನತ್ತ ಸಾಗಿತು.
ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಆಗಮಿಸಲಿವೆ.
ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ.
ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.
ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದೆ.
ಆ. 23ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.
ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಸಚಿವ ವೆಂಕಟೇಶ್, ಅನಿಲ್ ಚಿಕ್ಕಮಾದು, ಸಂಸದ ಸುನಿಲ್ ಬೋಸ್, ಶಾಸಕ ಹರೀಶ್ ಗೌಡ ಸೇರದಂತೆ ಮತ್ತಿತರ ಅಧಿಕಾಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು…