ಕೊರಗಜ್ಜ ದೇವಸ್ಥಾನ ತೆರುವು…ರಾಜಾಕಾಲುವೆ ಮೇಲೆ ನಿರ್ಮಾಣವಾಗಿದ್ದ ದೇವಸ್ಥಾನ…ಜಿಲ್ಲಾಡಳಿತ ಕಾರ್ಯಾಚರಣೆ…
- TV10 Kannada Exclusive
- August 26, 2024
- No Comment
- 1004
ಮೈಸೂರು,ಆ26,Tv10 ಕನ್ನಡ
ಬೆಳ್ಳಂಬೆಳಗ್ಗೆ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿ ಜೆಸಿಬಿಘರ್ಜಿಸಿದೆ.ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಪವಾಡ ಪುರುಷ ಕೊರಗಜ್ಜ ದೇವಾಲಯವನ್ನ ಜಿಲ್ಲಾಡಳಿತ ನೆಲಸಮ ಮಾಡಿದೆ.ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ. R ರಕ್ಷಿತ್ ರವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನ ಡೆಮಾಲಿಷ್ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ ಸ ನಂ. 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು.ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು.ಈ ಸಂಭಂಧ ದಾಖಲೆಗಳನ್ನ ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ.ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ.ಹಾಗೂ ಒತ್ತುವರಿಯನ್ನ ತೆರುವುಗೊಳಿಸುವಂತೆ ಆದೇಶಿಸಿದ್ದಾರೆ.ಅದರಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ರವರು ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆಯನ್ನ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನ ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಜಯಪುರ ಹೋಬಳಿ ಉಪತಹಸೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕರಾದ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು. ಬೋಗಾದಿ ಪಟ್ಟ ಪಂಚಾಯಿತಿ ಅಧಿಕಾರಿಗಳು, ಸಿಬಂದಿ ವರ್ಗದವರು,ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬಂದಿಗಳು ಭಾಗವಹಿಸಿದ್ದರು…