ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸಸ್ಪೆಂಡ್…ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಕ್ರಮ…ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ…

ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸಸ್ಪೆಂಡ್…ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಕ್ರಮ…ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ…

ಮೈಸೂರು,ಸೆ2,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ

ನಡೆದ ಅಕ್ರಮಗಳಿಗೆ ಓರ್ವ ಅಧಿಕಾರಿ ತಲೆದಂಡವಾಗಿದೆ.ತನಿಖೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ನೀಡಿದ ವರದಿ ಆಧಾರದ ಮೇಲೆ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ರನ್ನ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತು ಪಡಿಸಲಾಗಿದೆ. ತಾಂತ್ರಿಕ ಸಮಿತಿ ಕಡತಗಳನ್ನ,ಸುತ್ತೋಲೆಗಳನ್ನ,ಮಾರ್ಗಸೂಚಿಗಳನ್ನ ಪರಿಶೀಲಿಸಿ ನಿಯಮಬಾಹಿರವಾಗಿ ಕೈಗೊಂಡ ಕ್ರಮಗಳ ಬಗ್ಗೆ ವಿಸ್ತೃತ ವರದಿಯನ್ನ ನೀಡಿರುವ ಆಧಾರದ ಮೇಲೆ ಸಸ್ಪೆಂಡ್ ಮಾಡಲಾಗಿದೆ.

ಜಿ.ಟಿ.ದಿನೇಶ್ ಕುಮಾರ್ ರವರ ಆಡಳಿತಾವಧಿಯಲ್ಲಿ ನಡೆದ ಕೆಲವು ಸಭೆಗಳಲ್ಲಿ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನ ದಾಖಲಿಸದೇ ಮಂಡಿಸಿರುವುದು,ಸರ್ಕಾರದ ಯಾವುದೇ ನಿರ್ದೇಶನಗಳನ್ನ ಪಾಲಿಸದಿರುವುದು,ವ್ಯತಿರಿಕ್ತವಾಗಿ ನಿರ್ಣಯಗಳನ್ನ ಕೈಗೊಂಡಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.50-50 ಅನುಪಾತದಲ್ಲಿ ನಿಯಮಗಳನ್ಮ ಅನುಸರಿಸದಿರುವುದು ಸೇರಿದಂತೆ ಹಲವು ಅಕ್ರಮಗಳನ್ನ ವರದಿಯಲ್ಲಿ ಸವಿಸ್ತಾರವಾಗಿ ಉಲ್ಲೇಖಿಸಿ ಅಮಾನತು ಆದೇಶ ಹೊರಡಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *