ಅಕ್ರಮ ಸಂಬಂಧ ಶಂಕೆ…ಮಚ್ಚಿನಿಂದ ಕೊಂದು ವ್ಯಕ್ತಿ ಕೊಲೆ…ಆರೋಪಿ ಪರಾರಿ…

ಅಕ್ರಮ ಸಂಬಂಧ ಶಂಕೆ…ಮಚ್ಚಿನಿಂದ ಕೊಂದು ವ್ಯಕ್ತಿ ಕೊಲೆ…ಆರೋಪಿ ಪರಾರಿ…

ನಂಜನಗೂಡು,ಸೆ6,Tv10 ಕನ್ನಡಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮೊಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (42) ಕೊಲೆಯಾದ ವ್ಯಕ್ತಿ. ಆರೋಪಿ ಮಹದೇವ ಶೆಟ್ಟಿ (45) ಪರಾರಿಯಾಗಿದ್ದಾನೆ.
ಮಹದೇವ ಶೆಟ್ಟಿ ಪತ್ನಿ ಜೊತೆ ರಂಗಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗಿದೆ.ಈ ವಿಚಾರವಾಗಿ ರಂಗಸ್ವಾಮಿ ಮತ್ತು ಮಹದೇವ ಶೆಟ್ಟಿ ನಡುವೆ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ಇಂದು ರಂಗಸ್ವಾಮಿ ಗ್ರಾಮದ ಬೇಕರಿಯ ಬಳಿ ಕುಳಿತುಕೊಂಡಿದ್ದ ವೇಳೆ ಮಹದೇವ ಶೆಟ್ಟಿ ಮತ್ತು ರಂಗಸ್ವಾಮಿ ಇಬ್ಬರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಮಹದೇವ ಶೆಟ್ಟಿ ರಂಗಸ್ವಾಮಿಯ ಮೇಲೆ ಮೊಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್ಪಿ ರಘು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುನೀಲ್ ಕುಮಾರ್ ಸ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಯ ಸೆರೆಗಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *