ಅನೈತಿಕ ಸಂಭಂಧ ಪ್ರಶ್ನಿಸಿದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಪೊಲೀಸರಿಗೆ ಶರಣಾದ ಆರೋಪಿ…

ಅನೈತಿಕ ಸಂಭಂಧ ಪ್ರಶ್ನಿಸಿದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಪೊಲೀಸರಿಗೆ ಶರಣಾದ ಆರೋಪಿ…

ಹುಣಸೂರು,ಸೆ15,Tv10 ಕನ್ನಡಅನೈತಿಕ ಸಂಭಂಧ ವಿರೋಧಿಸಿದ ಪತ್ನಿಯನ್ನ ಪತಿರಾಯನೇ ಭೀಕರವಾಗಿ ಕೊಂದು

ಪೊಲೀಸರಿಗೆ ಶರಣಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ.ರೋಜಾ(37) ಪತಿ ಸ್ವಾಮಿನಾಯಕನಿಂದ ಹತ್ಯೆಗೊಳಗಾದ ದುರ್ದೈವಿ.12 ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.ಹಲವು ವರ್ಷಗಳ ಕಾಲ ಅನ್ಯೋನ್ಯ ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಅದೇ ಗ್ರಾಮದ ಮಹಿಳೆಯೊಬ್ಬಳು ಬಿರುಗಾಳಿಯಂತೆ ಎಂಟ್ರಿ ಕೊಟ್ಟಿದ್ದಾಳೆ.5 ವರ್ಷಗಳ ಹಿಂದೆ ಪತಿಯನ್ನ ಕಳೆದುಕೊಂಡ ಮಹಿಳೆ ಸ್ವಾಮಿನಾಯಕನ ಜೊತೆ ಸಂಭಂಧ ಬೆಳೆಸಿದ್ದಾಳೆ.ಈ ವಿಚಾರ ರೋಜಾಗೆ ಗಮನಕ್ಕೆ ಬಂದು ಗಲಾಟೆ ಆಗಿದೆ.ಒಂದೆರಡು ಬಾರಿ ಸ್ವಾಮಿನಾಯಕನಿಗೆ ಕುಟುಂಬಸ್ಥರು ಬುದ್ದಿವಾದ ಹೇಳಿದ್ದಾರೆ.ಹೋಗಿದ್ದೂ ಸ್ವಾಮಿನಾಯಕ ಮಹಿಳೆಯ ಜೊತೆಗಿನ ಸಂಭಂಧ ಮುರಿದುಕೊಂಡಿಲ್ಲ.ಇತ್ತೀಚೆಗೆ ಇದೇ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ಗಲಾಟೆ ಹೆಚ್ಚಾಗಿದೆ.ಸಂಭಂಧ ಬಿಡುವಂತೆ ಪಟ್ಟು ಹಿಡಿದಿದ್ದಾಳೆ.ಇಂದು ಮಧ್ಯಾಹ್ನ ನೀರು ಹಿಡಿಯಲು ಮನೆಯಿಂದ ಹೊರಬಂದ ರೋಜಾ ಮೇಲೆ ಸ್ವಾಮಿನಾಯಕ ಮೊಚ್ಚಿನಿಂದ ಕೊಚ್ಚಿದ್ದಾನೆ.ತೀವ್ರ ರಕ್ತಸ್ರಾವದಿಂದ ರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಪತ್ನಿಯನ್ನ ಭೀಕರವಾಗಿ ಕೊಂದ ಸ್ವಾಮಿನಾಯಕ ಬಿಳಿಕೆರೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಎಸ್ಪಿ ವಿಷ್ಣುವರ್ಧನ್ ಹಾಗೂ ಡಿವೈಎಸ್ಪಿ ಗೋಪಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *