ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋಧಿ ಜನ್ಮದಿನಾಚರಣೆ…

ಮೈಸೂರು,ಸೆ17,Tv10 ಕನ್ನಡಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಹಾಗೂ ಚಹಾ ವಿತರಿಸುವ ಮೂಲ ಪ್ರಧಾನಿ ನರೇಂದ್ರ ಮೋದಿ ರವರ ಜನ್ಮದಿನಾಚರಣೆಯನ್ನ ಮೈಸೂರಿನಲ್ಲಿ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಮೈಸೂರಿನ ನ್ಯೂ ಸಯ್ಯಾಜಿರಾವ್ ರಸ್ತೆ
ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ ಇಂದು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಇದೇ ವೇಳೆ ಸಾರ್ವಜನಿಕರಿಗೆ ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ ಚಹ ವಿತರಿಸಿದರು.ಇದೇ ವೇಳೆ ಮಾತನಾಡಿ ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಧಾನಿ ಮೋದಿಯವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ.ಪಕ್ಷಕ್ಕಾಗಿ ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಅರ್ಪಿಸಿ ಕೆಲಸ ಮಾಡುತ್ತಿರುವ ಪ್ರಧಾನಿಯವರ ದಾರಿಯಲ್ಲೇ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರುಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಬಿಜೆಪಿ ವೈದ್ಯಕೀಯ ಪ್ರಕೋಸ್ಟ ಸಂಚಾಲಕರಾದ ಗಿರೀಶ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿ ದಾಸ್ ಪ್ರಕಾಶ್, ಮಾಜಿನಗರಪಾಲಿಕ ಸದಸ್ಯರಾದ ರಂಗಸ್ವಾಮಿ, ಕೇಬಲ್ ವಿಜಿ, ಕುಮಾರ್ ಗೌಡ, ಸೂರಜ್, ಸದಾಶಿವ್, ದಾರಿಪುರ ಚಂದ್ರಶೇಖರ್, ಅರವಿಂದ್, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *