
ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…
- TV10 Kannada Exclusive
- September 20, 2024
- No Comment
- 233


ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ನಂಜನಗೂಡು,ಸೆ20,Tv10 ಕನ್ನಡ

ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು ಹೊಸಹಳ್ಳಿ ಗೇಟ್ ಬಳಿ ನಡೆದಿದೆ.ಬಸ್ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಂಗಳೂರಿನ ಕಾಮಾಕ್ಷಿಪಾಳ್ಯ ಹಾಗೂ ಬೊಮ್ಮಸಮುದ್ರ ಮೂಲದ ಭಕ್ತರು ಮೂರು ದಿನಗಳ ಹಿಂದೆ ಅಯ್ಯಪ್ಪ ಸ್ವಾಮಿ ದರುಶನಕ್ಕೆ ತೆರಳಿ ಹಿಂದಿರುಗುವಾಗ ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಗಾಯಗೊಂಡ ಭಕ್ತರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂಜನಗೂಡು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ…