ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಮಳಿಗೆ ಭೋಗ್ಯ ವಿಚಾರದಲ್ಲಿ ಕಿರಿಕ್…ಸಿಎಆರ್ ಪೇದೆ ಮೇಲೆ ಹಲ್ಲೆ…ಆರೋಪ,ಪ್ರತ್ಯಾರೋಪ ಪ್ರಕರಣ ದಾಖಲು…

ಸಾಲಿಗ್ರಾಮ,ಸೆ25,Tv10 ಕನ್ನಡ

ಮಳೆಗೆ ಭೋಗ್ಯದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಸಿಎಆರ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆದ ಘಟನೆ ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪೇದೆ ಧನಂಜಯ(45) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಘಟನೆಗೆ ಸಂಭಂಧಿಸಿದಂತೆ ಎರಡು ಕುಟುಂಬಗಳು ಆರೋಪಿಸಿ ಪರಸ್ಪರ ಪ್ರಕರಣ ದಾಖಲಿಸಿದ್ದಾರೆ.

ಹೊಸೂರು ಗ್ರಾಮದಲ್ಲಿ ಮಳೆಗೆಗಳನ್ನ ಪೇದೆ ಧನಂಜಯ ರವರು ಚಿಕ್ಕಪ್ಪ ಸೋಮಶೇಖರ್ ಗೆ ಭೋಗ್ಯಕ್ಕೆ ನೀಡಿದ್ದಾರೆ.ಬಾಡಿಗೆ ವಸೂಲಿ ಮಾಡಲು ಧನಂಜಯ ರವರು ಪತ್ನಿ ರಾಜೇಶ್ವರಿ ಜೊತೆ ತೆರಳಿದಾಗ ಸೋಮಶೇಖರ್,ಇವರ ಪತ್ನಿ ಮಂಜುಳಾ ಹಾಗೂ ಪುತ್ರ ಲಯನ್ ರಾಜ್ ಮೂವರು ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಧನಂಜಯ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಆರೋಪಕ್ಕೆ ಪ್ರತಿಯಾಗಿ ಮಂಜುಳ ರವರು ಸಹ ಧನಂಜಯ ಹಾಗೂ ರಾಜೇಶ್ವರಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಹಣ ನೀಡಿ ಮಳಿಗೆಗಳನ್ನ ಬಿಡಿಸಿಕೊಂಡಿದ್ದರೂ ಕಿರುಕುಳ ನೀಡುತ್ತಿದ್ದಾರೆಂದು ಮಂಜುಳಾ ರವರು ಪೇದೆ ಧನಂಜಯ ಹಾಗೂ ಪತ್ನಿ ರಾಜೇಶ್ವರಿ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *